Header Ads
Header Ads
Breaking News

ತೊಕ್ಕೊಟ್ಟು ಜಂಕ್ಷನ್ ಬಳಿ ಸರಣಿ ಅಪಘಾತ: 4 ವಾಹನಗಳು ಜಖಂ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆಯ ಎದುರು ನಿಲ್ಲಿಸಿದ್ದ ನಾಲ್ಕು ವಾಹನಗಳಿಗೆ ಢಿಕ್ಕಿ ಹೊಡೆದು ಉರುಳಿ ಬಿದ್ದಿದೆ.ತಲಪಾಡಿಯಿಂದ ಬಂದ ಕೇರಳ ನೋಂದಣಿಯ ಕಾರು ರಾ.ಹೆ 66ರ ತೊಕ್ಕೊಟ್ಟು ಜಂಕ್ಷನ್ ಬಳಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರು, ಒಂದು ಬೈಕ್ ಮತ್ತು ಗೂಡ್ಸ್ ಟೆಂಪೋಗೆ ಢಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಢಿಕ್ಕಿಯ ರಭಸಕ್ಕೆ ನಾಲ್ಕು ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಕಾರಿನ ಸಹಸವಾರ ಇಬ್ರಾಹಿಂ ಖಲೀಲ್ ಎಂಬವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply