Header Ads
Breaking News

ದಕ್ಷಿಣ ಕನ್ನಡಕ್ಕೆ ಬಿಗ್ ಶಾಕ್ ಕೊಟ್ಟ ಕೊರೊನಾ : ಒಂದೇ ದಿನ ಮೂರು ಮಂದಿಗೆ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಲೇ ಇದೆ. ಇಂದು ಒಂದೇ ದಿನ ಮೂರು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೋಳೂರಿನ ಇಬ್ಬರು ನಿವಾಸಿಗಳು ಹಾಗೂ ಬಂಟ್ವಾಳದ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲಾಕ್ ಡೌನ್ ಆದೇಶ ತೆರವು ಮಾಡುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಇಂದು ಮೂವರಿಗೆ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ.

Related posts

Leave a Reply

Your email address will not be published. Required fields are marked *