
ದಕ್ಷಿಣ ಕನ್ನಡ ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದ ಸುತ್ತ 144 ನಿಷೇಧಾಜ್ಞೆ ಜಾರಿಗೊಳಿಸಿದ್ರು. ಪಕ್ಷದ ಕಾರ್ಯಕರ್ತರು ಹೊರಗೆ ಅಭ್ಯರ್ಥಿಗಳ ಗೆಲುವಿನ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಮಂಗಳೂರಿನ ಬೊಂದೇಲ್ ನಲ್ಲಿರುವ ಮತ ಎಣಿಕೆ ಕೇಂದ್ರದ ಹೊರಗಡೆ ನಿಷೇಧಾಜ್ಞೆ ಹೊರತಾಗಿಯೂ ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ ಕಾರ್ಯಕರ್ತರು ತಮ್ಮ ಪಕ್ಷದ ಪತಾಕೆಗಳನ್ನು ಹಿಡಿದು ಘೋಷಣೆ ಕೂಗಿದ್ರು. ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲುಪೊಲೀಸ್ರು ಹರಸಾಹಸ ಪಟ್ಟರು. ಮತ ಎಣಿಕೆ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ , ಘೋಷಣೆ ಕೂಗುವುದು. ಪಕ್ಷದ ಬಾವುಟಗಳನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ರು ಎಚ್ಚರಿಕೆ ನೀಡಿದರು.