Header Ads
Header Ads
Breaking News

ದಕ್ಷಿಣ ಕನ್ನಡ ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ಅರ್ಜಿ ಆಹ್ವಾನ : ಪ್ರದೀಪ್ ಡಿಸೋಜಾರಿಂದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಹಾಯಧನ ಅರ್ಜಿಯನ್ನ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರಾದ ಪ್ರದೀಪ್ ಡಿಸೋಜಾ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಪ್ರಸ್ತುತ ಮಂಗಳೂರು ಹಾಗೂ ಮೂಡಬಿದ್ರೆ ತಾಲೂಕು ವ್ಯಾಪ್ತಿಯಲ್ಲಿ ಈ ಯೋಜನೆಗಳು ಚಾಲ್ತಿಯಲ್ಲಿದೆ. ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ, ತುಂತುರು ನೀರಾವರಿ ಸಹಾಯಧನ, ಪ್ಯಾಕ್ ಹೌಸ್ ನಿರ್ಮಾಣ ಸಹಾಯಧನ, ಪಾಲಿ ಡ್ರೈಯರ್ ನಿರ್ಮಾಣಕ್ಕೆ ಸಹಾಯಧನಕ್ಕೆ ಅರ್ಜಿಯನ್ನ ಆಹ್ವಾನಿಸಲಾಗಿದೆ. 2019-20ನೇ ಸಾಲಿನಲ್ಲಿ ಗೇರು ಗಿಡ, ತೆಂಗಿನ ಗಿಡ, ಕಾಳುಮೆಣಸು ಗಿಡ, ಮಲ್ಲಿಗೆ ಕೊಕೋ ಗಿಡ, ಬಾಳೆಗಿಡಗಳನ್ನು ನಾಟಿ ಮಾಡಲು ಇಚ್ಚಿಸುವ ರೈತರಿಗೆ ಸಹಾಯಧನವನ್ನು ನೀಡಲಾಗಿದೆ ಎಂದು ತಿಳಿಸಿದರು.ಈ ವೇಳೆ ಜಿಲ್ಲಾ ಸಹಾಯಕ ತೋಟಗಾರಿಕೆ ಅಧಿಕಾರಿ ಮಹೇಶ್, ಯುಗೇಂದ್ರ ಸೇರಿದಂತೆ ಇನ್ನಿತರು ಉಪಸ್ಥಿತಿರಿದ್ದರು.

Related posts

Leave a Reply