Header Ads
Breaking News

ಜುಲೈ 1ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ ಕಾರ್ಯಕ್ರಮ

ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಮಂಗಳೂರು ಪತ್ರಿಕಾಭವನ ಟ್ರಸ್ಟ್‌ನ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 1ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನ ನಡೆಯಲಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದರು.
ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಹಿರಿಯ ಪತ್ರಕರ್ತ ಈಶ್ವರ ದೈತೋಟ ಸಮ್ಮೇಳನಾಧ್ಯಕ್ಷರಾಗಿದ್ದು, ಪೂರ್ವಾಹ್ನ 9ರಿಂದ ಸಂಜೆ ೫ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ನಾಗಾಲ್ಯಾಂಡ್ ರಾಜ್ಯಪಾಲರಾದ ಪಿ.ಬಿ. ಆಚಾರ್ಯ ಅವರು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭ ದ.ಕ. ಜಿಲ್ಲಾ ಪತ್ರಕರ್ತರ ಸಂಘ ಹೊರತರುತ್ತಿರುವ ಸ್ಮರಣ ಸಂಚಿಕೆ ಸಮಾಚಾರ ಲೋಕಾರ್ಪಣೆಯಾಗಲಿದೆ. ಇನ್ನು ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿಗಳನ್ನು ಆಯೋಜಿಲಸಾಗಿದೆ.
ಸಂಜೆ ೪ರಿಂದ 5 ಗಂಟೆವರೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಹಿರಿಯ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರು ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಇನ್ನು 2019ರ ಚೊಚ್ಚಲ ಬ್ರ್ಯಾಂಡ ಮಂಗಳೂರು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮುಹಮ್ಮದ್ ಆರೀಫ್ ಪಡುಬಿದ್ರಿ ಆಯ್ಕೆಯಾಗಿದ್ದು, ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಕಮಲ್ ಪಂತ್ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸಂಚಾಲಕರಾದ ಜಗನ್ನಾಥ್ ಶೆಟ್ಟಿ ಬಾಳಾ, ಹರೀಶ್ ರೈ, ಪುಷ್ಪರಾಜ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *