Header Ads
Header Ads
Header Ads
Breaking News

ದಡ್ಡಲಕಾಡು ಶಾಲೆಗೆ ಮೇಲಂತಸ್ತಿನ ಕಟ್ಟಡ ನಿರ್ಮಾಣ ಕಟ್ಟಡ ಕಾಮಗಾರಿಗೆ ಚಾಲನೆ

ಬಂಟ್ವಾಳ: ಮೂಡುನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದತ್ತುಯೋಜನೆಯಡಿ ಸುಮಾರು 1.5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕಟ್ಟಡ ನಿರ್ಮಾಣ ಕಾಮಾಗಾರಿಗೆ ಸೋಮವಾರ ಚಾಲನೆ ನೀಡಲಾಯಿತು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರ ಮಾತನಾಡಿ ಬಡವರ ಮಕ್ಕಳಿಗೂ ಕನ್ನಡದೊಂದಿಗೆ ಆಂಗ್ಲ ಭಾಷ ಕಲಿಕೆಗೆ ಅವಕಾಶ ನೀಡುವ ಮೂಲಕ ದುರ್ಗಾ ಫ್ರೆಂಡ್ಸ್ ಕ್ಲಬ್ ರಾಜ್ಯದಲ್ಲಿ ಮಾದರಿ ಕಾರ್ಯ ಮಾಡಿದೆ ಎಂದರು. ಶಾಲೆಗೆ ಬೇಕಾಗುವ ಅಗತ್ಯ ಪೀಠೋಪಕರಣಗಳನ್ನು ಮುಂದಿನ ವರ್ಷದ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಒದಗಿಸಿಕೊಡುವುದಾಗಿ ಅವರು ಭರವಸೆ ನೀಡಿದರು.

ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಅಧ್ಯಕ್ಷತೆ ವಹಿಸಿ ಕ್ಲಬ್ ಹಾಗೂ ಶಾಲೆಯ ಕಾರ್ಯ ಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಪ್ರಗತಿಪರ ಉಳಿಪಾಡಿಗುತ್ತು ರಾಜೇಶ್ ನಾಕ್, ಜಿ.ಪಂ.ಮಾಜಿ ಸದಸ್ಯೆ ಸುಲೋಚನಾ ಭಟ್, ದುರ್ಗಾ ಫ್ರೆಂಡ್ಸ್ ಕ್ಲಬ್ ಕಾರ್ಯದರ್ಶಿ ನವೀನ್ ಸೇಸಗುರಿ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ಮತ್ತಿತರರು ಉಪಸ್ಥಿತರಿದ್ದರು.

ಗಾಂಧಿ ಜಯಂತಿಯ ಅಂಗವಾಗಿ ನಮ್ಮ ಸ್ವಚ್ಛತೆ ನಮ್ಮ ಆದ್ಯತೆ ಕಾರ್ಯಕ್ರಮದ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗಣ್ಯರು, ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಲಾ ಪರಿಸರವನ್ನು ಸ್ವಚ್ಛಗೊಳಿಸಿದರು. ಬಳಿಕ ಸ್ವಚ್ಛತಾ ಆಂದೋಲನದ ಲೋಗೋ ಅನಾವರಣಗೊಳಿಸಲಾಯಿತು. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ನೆಟ್ಟು ಬೆಳಿಸಿದ ತರಕಾರಿ ಕೃಷಿಯನ್ನು ಗಣ್ಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ಸಂದರ್ಭ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಮತ್ತು ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಜ| ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಹಾಗೂ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಸಹಯೋಗದೊಂದಿಗೆ 93 ನೇ ರಕ್ತದಾನ ಶಿಬಿರ ನಡೆಯಿತು. ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಸ್ವಯಂ ರಕ್ತದಾನ ಮಾಡಿದರು. ಸೇವಾಂಜಲಿಯ ಕೃಷ್ಣಕುಮಾರ್ ಪೂಂಜಾ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಹಲವು ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.

Related posts

Leave a Reply