Header Ads
Header Ads
Breaking News

ದಡ್ಡಲಕಾಡು ಸರಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆ : ಕಟ್ಟಡ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಇದರ ದತ್ತು ಯೋಜನೆಯಡಿ ನಿರ್ಮಾಣಗೊಂಡಿರುವ ದಡ್ಡಲಕಾಡು ಸರಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕಟ್ಟಡದ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶಾಲೆಯಲ್ಲಿ ಜರುಗಿತು.

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ, ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್, ಕರೆಂಕಿ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸೀತಾರಾಮ ಕರೆಂಕಿ, ಪ್ರಮುಖರಾದ ಪರುಷೋತ್ತಮ ಅಂಚನ್, ಶೇಖರ ಅಂಚನ್, ವಿಠಲ ಡಿ, ವಿನೋದ್ ಕುಮಾರ್, ನಾಗೇಶ್ ದಡ್ಡಲಕಾಡು, ರಮೇಶ್ ಕುಲಾಲ್ ಕೊಂಬ್ರಬೈಲು ಹಾಜರಿದ್ದರು. ಜನವರಿ 5 ಮತ್ತು 6 ರಂದು ಶಾಲೆಯ ಮೇಲಂತಸ್ತಿನ ಕಟ್ಟಡ ಉದ್ಘಾಟನಾ ಸಮಾರಂಭ ನೆರೆವೇರಲಿದೆ.

Related posts

Leave a Reply