Header Ads
Header Ads
Breaking News

ದನದ ವ್ಯಾಪಾರಿಯ ಅನುಮಾನಾಸ್ಪದ ಸಾವು

 

 ದನದ ವ್ಯಾಪಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ. ಮೃತ ಪಟ್ಟವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜೋಕಟ್ಟೆ ನಿವಾಸಿ ಹುಸೇನಬ್ಬ ಎಂದು ಗುರುತಿಸಲಾಗಿದೆ. ದನ ಸಾಗಾಟ ವೇಳೆಯಲ್ಲಿ ಪೋಲೀಸರು ವಾಹನ ಅಡ್ಡ ಕಟ್ಟಿದ ಸಂದರ್ಭ ತಪ್ಪಿಸಿಕೊಂಡಿದ್ದ ಹುಸೇನಬ್ಬ ಶವವಾಗಿ ಪತ್ತೆಯಾಗಿದ್ದರು. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ನಿಜ ಕಾರಣ ತಿಳಿಯಲಿದೆ.  ದಕ್ಷಿಣ ಕನ್ನಡ ಜಿಲ್ಲೆ ಮೂಲದ ಜೋಕಟ್ಟೆ ನಿವಾಸಿಯಾಗಿರುವ ಹುಸೇನಬ್ಬ ಕಳೆದ 35 ವರ್ಷಗಳಿಂದ ಹಸುವಿನ ವ್ಯಾಪಾರ ಮಾಡುತ್ತಿದ್ದರು. ಕಳೆದ ರಾತ್ರಿ ಉಡುಪಿಯ ಪೆರ್ಡೂರು ಸಮೀಪ ಬರುತ್ತಿರುವಾಗ ಪೊಲೀಸರು ವಾಹನವನ್ನು ಅಡ್ಡಗಟ್ಟಿದ್ದಾರೆ. ಹಸು ಸಾಗಾಟದ ವಾಹನದಲ್ಲಿದ್ದ ನಾಲ್ಕೈದು ಮಂದಿ ದಿಕ್ಕಾಪಾಲಾಗಿ ಓಡಿದ್ದಾರೆ. ಪೊಲೀಸರಿ ವಾಹನವನ್ನು ಕಳೆದ ರಾತ್ರಿಯೇ ವಶಪಡಿಸಿಕೊಂಡಿದ್ದಾರೆ. ರಾತ್ರಿ ತಪ್ಪಿಸಿಕೊಂಡು ಓಡಿದ್ದ ಹುಸೇನ್ ಮೃತದೇಹ ಬೆಳಗ್ಗೆ ಕಾಫಿ ತೋಟದಲ್ಲಿ ಪತ್ತೆಯಾಗಿದೆ.


ಹಿರಿಯಡ್ಕ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲು ಮಾಡಿದ್ದಾರೆ. ಹುಸೇನಬ್ಬನ ಮನೆಯವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ದುಷ್ಕರ್ಮಿಗಳು ಕೊಲೆ ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಳೆದ ರಾತ್ರಿ ಪೊಲೀಸರ ಜೊತೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿದ್ದರೆಂಬ ಸಂಶಯವನ್ನು ವ್ಯಕ್ತಗೊಳಿಸಿದ್ದಾರೆ. ಹುಸೇನಬ್ಬ ಮೃತದೇಹವನ್ನು ಮಣಿಪಾಲ ಶವಾಗಾರಕ್ಕೆ ರವಾನಿಸಲಾಗಿದೆ.ಹೃದಯಾಘಾತದಿಂದ ಸತ್ತಿರಬಹುದೆಂಬ ಶಂಕೆ ಯೂ ಇದೆ. ಮೃತರು ಹೃದಯದ ಸಮಸ್ಯೆ ಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶವಪರೀಕ್ಷಾ ವರದಿ ಬಂದ ನಂತರ ಅನುಮಾನಾಸ್ಪದ ಸಾವಿಗೆ ಸರಿಯಾದ ಕಾರಣ ತಿಳಿಯಬಹುದು. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ಸತ್ಯಾಂಶ ತಿಳಿಯಲಿದೆ ಎಂದಿದ್ದಾರೆ.

 

.

Related posts

Leave a Reply