Header Ads
Breaking News

ದರ್ಬೆ ವೃತ್ತಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಹೆಸರಿಡಲು ಆಗ್ರಹ : ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಪುತ್ತೂರು: ಮುಂದಿನ ಒಂದು ವರ್ಷದೊಳಗಾಗಿ ಪುತ್ತೂರಿನಲ್ಲಿ ದರ್ಬೆ ವೃತ್ತಕ್ಕೆ ಸಂವಿಧಾನ ಶಿಲ್ಪಿ ಡಾ.ಆರ್. ಅಂಬೇಡ್ಕರ್ ಎಂದು ನಾಮಕರಣ ಮಾಡಬೇಕು ಮತ್ತು ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಬೇಕು. ಇಲ್ಲದಿದ್ದಲ್ಲಿ ನಗರದ ಮಿನಿ ವಿಧಾನಸೌಧದ ಬಳಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಉಗುಳು ಚೆಲ್ಲುವ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಆನಂದ ಮಿತ್ತಬೈಲ್ ಎಚ್ಚರಿಕೆ ನೀಡಿದ್ದಾರೆ.

ನಗರದ ದರ್ಬೆ ವೃತ್ತಕ್ಕೆ ಸಂವಿಧಾನ ಶಿಲ್ಪಿ ಡಾ.ಆರ್. ಅಂಬೇಡ್ಕರ್ ಎಂದು ನಾಮಕರಣ ಮಾಡಬೇಕು ಆಗ್ರಹಿಸಿ ಪುತ್ತೂರಿನ ಬಹುಜನ ಒಕ್ಕೂಟ ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ದರ್ಬೆ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಆನಂದ ಮಿತ್ತಬೈಲ್, ದರ್ಬೆ ವೃತ್ತಕ್ಕೆ ಅಂಬೇಡ್ಕರ್ ಅವರ ಹೆಸರನ್ನಿಡಬೇಕೆಂದು ಹಲವು ಸಮಯಗಳಿಂದ ಒತ್ತಾಯಿಸುತ್ತಾ ಬರಲಾಗುತ್ತಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಇದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಈ ಹಿನ್ನಲೆಯಲ್ಲಿ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸಲು ಒಂದು ವರ್ಷದ ಅವಕಾಶವನ್ನು ನೀಡಲಾಗುವುದು. ಬಳಿಕವೂ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಮಿನಿ ವಿಧಾನಸೌಧಕ್ಕೆ ಮತ್ತು ನಗರಸಭೆಗೆ ನಿತ್ಯ ಅಗಮಿಸುವ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ, ವಿವಿಧ ಪಕ್ಷಗಳ ಜನಪ್ರತಿನಿಧಿಗಳ ಮುಖಕ್ಕೆ ಛಿ… ಥೂ… ಎಂದು ಉಗುಳನ್ನು ಚೆಲ್ಲುವ ಮೂಲಕ ಆಕ್ರೋಶವನ್ನು ಹೊರಹಾಕಲಾಗುವುದು ಎಂದು ತಿಳಿಸಿದರು.

ಬಹುಜನ ಒಕ್ಕೂಟ ಹೋರಾಟ ಸಮಿತಿಯ ಪ್ರಮುಖ ಗಿರಿಯಪ್ಪ ನಾಯ್ಕ, ಒಕ್ಕೂಟದ ಪ್ರಮುಖರಾದ ಬಿ.ಕೆ. ಸೇಸಪ್ಪ ಬೆದ್ರಕಾಡು, ಅಬ್ದುಲ್ ಹಮೀದ ಸಾಲ್ಮರ, ಸಿದ್ಧೀಕ್ ಪುತ್ತೂರು, ನಿಶಾಂತ್ ಮುಂಡೋಡಿ, ಉದಯ ಕುಮಾರ್ ಎರಕಿಲ, ಸುಂದರ ನಿಡ್ಪಳ್ಳಿ, ಗಣೇಶ್ ಗುರಿಯಾನ, ಗಣೇಶ್, ರಾಜು ಹೊಸ್ಮಠ, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *