Header Ads
Header Ads
Header Ads
Breaking News

ದೇಯಿ ಬೈದ್ಯೇತಿ ಪುತ್ಥಳಿಗೆ ಅವಮಾನ ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಆಗ್ರಹ ಸುದ್ದಿಗೋಷ್ಠಿಯಲ್ಲಿ ಸುರೇಶ್ ಕಣೆಬರಡ್ಕ ಹೇಳಿಕೆ

ಪುತ್ತೂರು ತಾಲೂಕಿನ ಮುಡಿಪಿನಡ್ಕದಲ್ಲಿ ಸರಕಾರ ನಿರ್ಮಿಸಿದ ಔಷಧಿ ವನದಲ್ಲಿ ಸ್ಥಾಪಿಸಲಾಗಿರುವ ದೇಯಿ ಬ್ಯೇದ್ಯೇತಿಯ ಪುತ್ಥಳಿಗೆ ಅವಮಾನ ಮಾಡಿದ ಘಟನೆಯನ್ನು ಉಗ್ರವಾಗಿ ಖಂಡಿಸಿರುವ ದ.ಕ. ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಸುರೇಶ್ ಕಣಿಮರಡ್ಕ ಈ ಘಟನೆ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಸಮಾಜಕ್ಕೆ ಅಪಮಾನ ಮಾಡಿದ ಕೃತ್ಯವಾಗಿದೆ. ಈ ಷಡ್ಯಂತ್ರದ ಹಿಂದೆ ಮತಾಂಧ ಸಂಘಟನೆಗಳಾದ ಕೆ‌ಎಫ್‌ಡಿ ಮತ್ತು ಪಿ‌ಎಫ್‌ಐ ಕೈವಾಡವಿದೆ ಎಂದು ಆರೋಪಿಸಿದರು.

ಅನಂತರ ಮಾತನಾಡಿದ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ ಎಲ್ಲಾ ಬಿಲ್ಲವ ಸಂಘಟನೆಗಳು ರಾಜಕೀಯ ರಹಿತವಾಗಿ ಈ ಕೃತ್ಯದ ವಿರುದ್ಧ ಹೋರಾಟ ಮಾಡಬೇಕು. ಬಿಲ್ಲವ ಸಮಾಜದ ಎಲ್ಲರೂ ಈ ವಿಚಾರವಾಗಿ ರಾಜಕೀಯ ಬೇಧಗಳನ್ನು ಮರೆತು ಹೋರಾಟದಲ್ಲಿ ಪಾಲ್ಗೊಂಡು ಸರಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಪುತ್ತೂರು ನಗರಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಸುಂದರ ಪೂಜಾರಿ ಬಡಾವು, ಪ್ರಧಾನ ಕಾರ್ಯದರ್ಶಿ ವಿಮೋದ್ ಕುಮಾರ್ ಉಪಸ್ಥಿತರಿದ್ದರು.

ವರದಿ: ಅನೀಶ್ ಪುತ್ತೂರು

Related posts

Leave a Reply