Header Ads
Breaking News

ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆಯ ನೂತನ ಘಟಕದ ಉದ್ಘಾಟನಾ ಕಾರ್ಯಕ್ರಮ

ಮಂಗಳೂರಿನ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ನವಜಾತ ತೀವ್ರ ನಿಗಾ ಘಟಕ, ಮಕ್ಕಳ ತೀವ್ರ ರಕ್ಷಣಾ ಘಟಕ ಹಾಗೂ ಬರ್ನ್ಸ್ ಕ್ಯಾರ್ ಘಟಕ ಮತ್ತು ಅಂಗಾಂಶ ಬ್ಯಾಂಕ್‌ನ ನೂತನ ಘಟಕದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.

ಬೆಂಗಳೂರಿನ ನಿಮ್ಹಾನ್ಸ್‌ನ ನಿರ್ದೇಶಕ, ಇಂಡಿಯನ್ ಮೆಡಿಕಲ್ ಕೌನ್ಸಿಲ್ ಬೋರ್ಡ್ ಆಫ್ ಗವರ್ನರ್‍ಸ್ ಸದಸ್ಯ ಡಾ. ಗಂಗಾಧರ್ ಅವರು ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವ್ರು ರೋಗಿಗಳಿಗೆ ಸಹಾಯಕವಾಗುವ ರೀತಿಯಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ತೆರೆಯಲಾದ ನೂತನ ಚಿಕಿತ್ಸಾ ಘಟಕದ ಮೂಲಕ ಕ್ಲಪ್ತ ಸಮಯದಲ್ಲಿ ರೋಗಿಗಳಿಗೆ ಸೇವೆ ದೊರಕುವಂತಾಗಲಿ. ಎಂದು ಶುಭ ಹಾರೈಸಿದ್ರು.

ಇನ್ನು ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಮಾತನಾಡಿ ದೇಶದಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯರ ಸೇವೆ ಸಾಕಷ್ಟು ಲಭ್ಯವಿದ್ದರೂ ಸಾಮಾನ್ಯ ಕಾಯಿಲೆ, ಸಾಮಾನ್ಯ ಜನರ ರೋಗಕ್ಕೆ ಚಿಕಿತ್ಸೆ ಕೊಡುವ ವೈದ್ಯರ ಸಂಖ್ಯೆ ಕಡಿಮೆ ಇದ್ದು ಆ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದ್ರು.

ನಿಟ್ಟೆ ವಿವಿ ಕುಲಪತಿ ಪ್ರೊ. ಡಾ. ಕೆ. ಸತೀಶ್ ಕುಮಾರ್ ಭಂಡಾರಿ ಮಾತನಾಡಿ ರಾಜ್ಯದಲ್ಲಿಯೇ ಸುಟ್ಟ ಗಾಯದ ಚಿಕಿತ್ಸೆ ಕೊಡುವ ಆಧುನಿಕ ತಂತ್ರಜ್ಞಾನವುಳ್ಳ ಕೇಂದ್ರಗಳ ಸಂಖ್ಯೆ ವಿರಳವಾಗಿದ್ದು ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ನೂತನ ಚಿಕಿತ್ಸಾ ಕೇಂದ್ರ ಕರಾವಳಿ ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೆ ವರವಾಗಲಿದೆ. ಎಂದು ಹೇಳಿದ್ರು.

ಈ ಸಂದರ್ಭ ಸಹ ಕುಲಪತಿ ಡಾ. ಎಂ.ಎಸ್. ಮೂಡಿತ್ತಾಯ, ಡಾ. ಸಿದ್ಧಾರ್ಥ್, . ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ಡೀನ್ ಡಾ. ಪ್ರಕಾಶ್ ಪಿ.ಎಸ್ ಹಾಗೂ ಮತ್ತಿತರರು ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *