Header Ads
Header Ads
Breaking News

ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ವಿಶೇಷ ಮಕ್ಕಳಿಗೆ ಗಾಲಿಕುರ್ಚಿ ಹಾಗೂ ವಾಕರ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ದಕ್ಷಿಣ ವಲಯ ಹಾಗೂ ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿಶ್ವ ವಿದ್ಯಾಲಯದ ಅಧೀನದ ಎ.ಬಿ. ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಕಾಲೇಜು ಸಂಯುಕ್ತ ಆಶ್ರಯದಲ್ಲಿ ದೇರಳಕಟ್ಟೆಯ ನಿಟ್ಟೆ ವಿವಿ ಕ್ಯಾಂಪಸ್‌ನ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ವಿಶ್ವ ವಿಶೇಷ ಅಗತ್ಯವುಳ್ಳ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಗಾಲಿಕುರ್ಚಿ ಹಾಗೂ ವಾಕರ್ ವಿತರಿಸಿದ ದೇರಳಕಟ್ಟೆಯ ನಿಟ್ಟೆ ಪರಿಗಣಿಸಲಾಗಿರುವ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಎನ್. ವಿಶಾಲ್ ಹೆಗ್ಡೆಯವರು ಮಾತನಾಡಿ, ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸಹಾಯ ಮಾಡುವುದಕ್ಕಿಂತಲೂ ಅವರನ್ನು ಸಾಮಾನ್ಯರಂತೆ ಸಮಾಜದಲ್ಲಿ ತೊಡಗೊಸಿಕೊಳ್ಳುವುದರಿಂದ ಅವರಿಗೆ ಎಲ್ಲರಂತೆ ಸುಂದರವಾದ ಒಂದು ಬದುಕು ಕಲ್ಪಿಸಿಕೊಡಲು ಸಾಧ್ಯವಿದ್ದು ಆ ನಿಟ್ಟಿನಲ್ಲಿ ನಾವೆಲ್ಲರೂ ಚಿಂತಿಸಬೇಕಿದೆ ಎಂದರು.

ನಿಟ್ಟೆ ಪರಿಗಣಿಸಲಾಗಿರುವ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಕೆ. ಸತೀಶ್ ಕುಮಾರ್ ಭಂಡಾರಿ ಮಾತನಾಡಿ ವಿಶ್ವ ಸಂಸ್ಥೆಯ ಈ ಸಾಲಿನ ಆಶಯದಂತೆ ವಿಶೇಷ ಅಗತ್ಯವುಳ್ಳ ಮಕ್ಕಳ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದ್ದು ಅದರಂತೆ ಅವರಿಗೆ ಎದುರಾಗುವ ಕೀಳರಿಮೆ ಹೋಗಲಾಡಿಸಲು ಅವರನ್ನು ವಿಕಲಚೇತನರು, ವಿಶೇಷ ಚೇತನರು ಎನ್ನುವುದಕ್ಕಿಂತ ದಿವ್ಯಾಂಗಿಗಳು ಎಂದು ಉಲ್ಲೇಖಿಸಬೇಕು ಎಂದು ಕೇಂದ್ರ ಸರಕಾರ ತಿಳಿಸಿದೆ ಎಂದರು.

ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಜ್ಞಾನ ಮಹಾವಿದ್ಯಾಲಯದ ಡೀನ್ ಪ್ರೊ. ಡಾ.ಯು.ಎಸ್. ಕೃಷ್ಣ ನಾಯಕ್, ಕೆ.ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ. ಶಿವಕುಮಾರ್ ಹೀರೇಮಠ, ಮಕ್ಕಳ ದಂತ ವಿಭಾಗ ಮುಖ್ಯಸ್ಥೆ ಡಾ. ಅಮಿತಾ ಹೆಗ್ಡೆ, ಮಕ್ಕಳ ದಂತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಅಮರಶ್ರೀ, ಕ್ಷೇಮ ವೈಸ್ ಡೀನ್ ಡಾ. ಅಮೃತ ಮಿರಾಜ್ಕರ್ ಹಾಗೂ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ಕೆ.ಎಂ. ಕೆ. ಮಂಜನಾಡಿ, ಸಮನ್ವಯ ಅಧಿಕಾರಿ ಡಾ. ಪ್ರಶಾಂತ್ ಕೆ.ಎಸ್ ಉಪಸ್ಥಿತರಿದ್ದರು

Related posts

Leave a Reply