Header Ads
Header Ads
Header Ads
Breaking News

ದೇವಚಳ್ಳ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ 2019ಕ್ಕೆ ಚಾಲನೆ

ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಾಣಾಧಿಕಾರಿ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ದೇವಚಳ್ಳ ಇದರ ಆಶ್ರಯದಲ್ಲಿ ಸ.ಹಿ.ಪ್ರಾ ಶಾಲೆ ಅಮರಪಡ್ನೂರು ಇಲ್ಲಿ ಉದ್ಘಾಟನೆಗೊಂಡ ಮಕ್ಕಳ ವಿಜ್ಞಾನ ಹಬ್ಬ 2019 ವಿಜ್ಞಾನದ ಬಗೆಗಿನ ಹಲವು ಕುತೂಹಲಗಳಿಗೆ ನೂರಾರು ಮಕ್ಕಳು ಸಾಕ್ಷಿಯಾದರು.

2 ದಿನಗಳು ನಡೆಯುವ ಮಕ್ಕಳ ವಿಜ್ಞಾನ ಹಬ್ಬಕ್ಕೆ ಚಾಲನೆ ನೀಡಿದ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಮಾತನಾಡಿ ವಿಜ್ಞಾನ ಎನ್ನುವುದು ಜಗತ್ತಿನಲ್ಲಿ ವೇಗವಾಗಿ ಬೆಳೆಯುವ ಕ್ಷೇತ್ರ. ಈ ಕ್ಷೇತ್ರದ ಮೇಲೆ ಮಕ್ಕಳಿಗೆ ಅರಿವು ಮೂಡಿಸುವ ಸರಕಾರದ ಯೋಜನೆಗಳು ಮಕ್ಕಳಿಗೆ ಪ್ರಯೋಜನಕಾರಿಯಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಡಾ. ಸುಂದರ್ ಕೇನಾಜೆ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಅಮರಮೂಡ್ನೂರು ಗ್ರಾ.ಪಂ ಅಧ್ಯಕ್ಷ ಸೀತಾ ಎಚ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಲಕ್ಷ್ಮೀಶ ಚೊಕ್ಕಾಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರಸ ಸಮನ್ವಯಾಧಿಕಾರಿ ವೀಣಾ. ಎಂ.ಟಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಚಂದ್ರಮತಿ, ಗ್ರಾ.ಪಂ ಸದಸ್ಯರಾದ ಪುಪ್ಪಾವತಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *