Header Ads
Breaking News

ದೇವೇಗೌಡರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ವಿರೋಧಪಕ್ಷದ ನಾಯಕನಾಗಲು ಸರ್ಕಾರ ಬೀಳಿಸಿದ ಉದಾಹರಣೆಯನ್ನು ನಾನು ಇದುವರೆಗೂ ನೋಡಿಲ್ಲ’ ಎಂದು ಸಿದ್ದರಾಮಯ್ಯ ವ್ಯಂಗ್ಯವಾಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಸಿದ್ದರಾಮಯ್ಯ ಅವರೇ ಕಾರಣ ಎಂದು ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದರು.

ದೇವೇಗೌಡರು ನನ್ನ ವಿರುದ್ದ ಮಾಧ್ಯಮಗಳಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ನಾನು ಮೌನವಾಗಿದ್ದರೆ ಜನರಿಗೆ ತಪ್ಪು ಸಂದೇಶ ಹೋಗಲಿದೆ ಎಂಬ ಕಾರಣಕ್ಕೆ ನಾನು ಮಾತನಾಡುತ್ತಿದ್ದೇನೆ ಎಂದು ಹೇಳಿದರು. ದೇಶದಲ್ಲಿ ಕೋಮುವಾದಿ ಪಕ್ಷ ಅಧಿಕಾರದಲ್ಲಿದೆ. ಸಾಂವಿಧಾನಿಕ ಸಂಸ್ಥೆಗಳು ದುರ್ಬಳಕೆ ಆಗ್ತಿವೆ. ಇಂತಹ ಸಂದರ್ಭದಲ್ಲಿ ರಾಜಕೀಯವಾಗಿ ಎಲ್ಲರೂ ಒಟ್ಟಾಗಿರಬೇಕಾಗುತ್ತೆ. ಆ ಒಂದೇ ಕಾರಣಕ್ಕಾಗಿ ಜೆಡಿಎಸ್‌ಗೆ ಬೆಂಬಲ ನೀಡಿದ್ದೆವು ಎಂದು ಹೇಳಿದರು. ದೇವೇಗೌಡ ಅವರು ಮಾಡಿರುವ ಎಲ್ಲ ಆರೋಪಗಳೂ ಆಧಾರರಹಿತ. ಇವೆಲ್ಲವರೂ ರಾಜಕೀಯ ದುರುದ್ದೇಶದಿಂದ ಮಾಡಿರುವ ಸುಳ್ಳು ಆರೋಪಗಳಾಗಿವೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *