Header Ads
Breaking News

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ: ಸಚಿವೆ ಡಾ. ಜಯಮಾಲಾ ಆರೋಪ

ಕುಂದಾಪುರ: ಯುವಜನತೆ ಇಂದು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಆದರೆ ಯುವಕರ ಆಲೋಚನೆಗೆ ಬಾರದಿರುವ ಅನೇಕ ವಿಚಾರಗಳಿವೆ. ದೇಶದಲ್ಲಿ ಉದ್ಯೋಗ ಸೃಷ್ಠಿಯಗುತ್ತಿಲ್ಲ. ಯುವಕರಿಗೆ ಉದ್ಯೋಗ ಕೊಟ್ಟರೆ ಬಿಜೆಪಿಯ ಬಾವುಟಗಳನ್ನು ಬೀದಿಯಲ್ಲಿ ಹಿಡಿಯುವವರಿರುವುದಿಲ್ಲ. ಹೀಗಾಗಿ ಇಪ್ಪತ್ತೇಳು ಲಕ್ಷ ಉದ್ಯೋಗ ಖಾಲಿ ಇದ್ದರೂ ಕೇಂದ್ರ ಸರ್ಕಾರ ಭರ್ತಿ ಮಾಡುತ್ತಿಲ್ಲ ಎಂದು ಉಡುಪಿ ಉಸ್ತುವಾರಿ ಸಚಿವೆ ಜಯಮಾಲಾ ಹೇಳಿದರು.

ಅವರು ಆರ್.ಎನ್ ಶೆಟ್ಟಿ ಮಿನಿ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಕಳೆದ ಐದು ವರ್ಷದಲ್ಲಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳು ಕರಾವಳಿಗೆ ಏನೂ ಕೊಡುಗೆ ಕೊಟ್ಟಿಲ್ಲ. ಹಲವಾರು ಜ್ವಲಂತ ಸಮಸ್ಯೆಗಳು ಈ ಭಾಗದ ಜನರನ್ನು ಕಾಡಿದೆ ಎಂದು ಹೇಳಿದರು.

ಆನಂತರ ಮಾತನಾಡಿದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು, ಕಾರ್ಯಕರ್ತರು ತಾಯಿ ತನ್ನ ಮಗುವನ್ನು ಕೊಲ್ಲಬೇಕು ಎಂದು ಯೋಚನೆ ಮಾಡಿದ್ದರೆ ಅದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಒಬ್ಬ ಅಭ್ಯರ್ಥಿಯನ್ನು ಸೋಲಿಸಬೇಕು ಎಂದು ಕಾರ್ಯಕರ್ತರು ಮನಸ್ಸು ಮಾಡಿದರೆ ಆ ಅಭ್ಯರ್ಥಿಯನ್ನು ಯಾರಿಂದಲೂ ಗೆಲ್ಲಿಸಲು ಸಾಧ್ಯವಿಲ್ಲ. ಕಾರ್ಯಕರ್ತರೇ ನನಗೆ ಆಸ್ತಿ. ನೀವೆಲ್ಲ ಒಗ್ಗೂಡಿ ಕೆಲಸ ಮಾಡಿದರೆ ಮಾತ್ರ ನನಗೆ ಗೆಲುವು ಸಾಧ್ಯ ಎಂದು ಹೇಳಿದರು.

ಈ ಸಂದರ್ಭ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *