Header Ads
Breaking News

ಮಂಗಳೂರಿನಲ್ಲಿ ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂರವರ ಪುಣ್ಯತಿಥಿ ಆಚರಣೆ

ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂರವರ ಪುಣ್ಯತಿಥಿಯನ್ನು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ದೇಶದ ಮೊದಲ ಪ್ರಧಾನಮಂತ್ರಿ, ಮಕ್ಕಳ ಪ್ರೀತಿಯ ಚಾಚಾ ಎಂದೇ ಪ್ರಸಿದ್ಧಿ ಪಡೆದಿರುವ ಜವಹರಲಾಲ್ ನೆಹರುರವರ ಪುಣ್ಯತಿಥಿಯನ್ನು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೆಹರೂ ಅವರ ಭಾವಚಿತ್ರಕ್ಕೆ ಮಾಜಿ ಸಚಿವ ರಮಾನಾಥ ರೈ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ, ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ನೆಹರೂ ಅವರು ದೇಶ ಕಂಡ ಒಬ್ಬ ಅಪ್ರತಿಮ ನಾಯಕ ಹಾಗೂ ದೇಶದ ಮೊದಲ ಪ್ರಧಾನಿ. ನೆಹರು ಒಬ್ಬ ಸ್ವತಂತ್ರ್ಯ ಹೊರಾಟಗಾರ, ಪ್ರಧಾನಿಯಾಗಬೇಕು ಎಂದು ಹೊರಾಡಿದವರಲ್ಲ. ಇತ್ತೀಚಿನ ದಿನಗಳಲ್ಲಿ ಕೆಲವು ರಾಜಕೀಯ ನಾಯಕರು ಸ್ವಾತಂತ್ರ್ಯ ಹೋರಾಟಗಾರನ್ನು ಅಗೌರವಿಸುತ್ತಿದ್ದಾರೆ. ಅವರು ದೇಶಕ್ಕಾಗಿ ಮಾಡಿದ ತ್ಯಾಗವನ್ನು ಮರೆಯುವಂತಿಲ್ಲ ಎಂದು ಹೇಳಿದರು.  ಈ ವೇಳೆ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ಮಾತನಾಡಿ ಪಂಚವಾರ್ಷಿಕ ಯೋಜನೆಯ ಮೂಲಕ ದೇಶದ ಮೂಲೆ ಮೂಲೆಯ ಪ್ರದೇಶಗಳನ್ನು ಅಭಿವೃದ್ಧಿ ಮಾಡಿದ ನಾಯಕ. ಉತ್ತಮ ಆರ್ಥಿಕ ವ್ಯವಸ್ಥೆಯ ಮೂಲಕ ದೇಶವನ್ನು ಕಟ್ಟಿ ಬೆಳೆಸಿದ ಪ್ರಧಾನಿಗೆ ಪ್ರಸ್ತುತ ದೇಶವನ್ನು ಆಡಳಿತ ಮಾಡುತ್ತಿರುವ ಪಕ್ಷ ಅಗೌರವವನ್ನು ತೋರಿಸುತ್ತಿದೆ. ಅವರು ಮಾಡಿದ ಸಾಧನೆಯನ್ನು ಗುರುತಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಹೇಳಿದರು.  ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *