Header Ads
Header Ads
Header Ads
Header Ads
Header Ads
Header Ads
Breaking News

ದೇಶಪ್ರೇಮದ ಪಾಠ ನಾವು ಈಶ್ವರಪ್ಪರಿಂದ ಕಲಿಯಬೇಕಾಗಿಲ್ಲ : ಎಂ.ಎಸ್. ಮುಹಮ್ಮದ್ ಹೇಳಿಕೆ

ಸಮುದಾಯದ ವಿರುದ್ಧದ ಹೇಳಿಕೆಗಳು ಈಶ್ವರಪ್ಪನವರಿಂದ ಇದೇ ಮೊದಲಲ್ಲ. ಈ ಹಿಂದೆಯೂ ಕಚೇರಿ ಗುಡಿಸಿದ ಮುಸ್ಲಿಂ ಸಮುದಾಯದವರಿಗೆ ಮಾತ್ರ ಬಿಜೆಪಿ ಟಿಕೆಟ್ ಎಂದು ಹೇಳಿಕೆ ನೀಡಿದ್ದರು. ಅಂತಹ ಟಿಕೆಟ್ ನಮಗೆ ಬೇಕಾಗಿಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಹೇಳಿದರು.ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬಿಜೆಪಿಗೆ ಮತ ಹಾಕದವರು ಪಾಕಿಸ್ತಾನ ಪರವಾಗಿರುವವರು ಅವರು ಹೇಳಿದ್ದಾರೆ. ಸಂವಿಧಾನ ಬದ್ದವಾಗಿ ಪ್ರತಿಜ್ಞೆ ಸ್ವೀಕರಿಸಿ, ಸಂವಿಧಾನದಲ್ಲಿ ನಂಬಿಕೆ ಇದ್ದಲ್ಲಿ ಖಂಡಿತಾ ಈ ಕೀಳು ಮಟ್ಟದ ಹೇಳಿಕೆ ನೀಡುತ್ತಿರಲಿಲ್ಲ. ನಮ್ಮನ್ನು ಯಾವ ರೀತಿಯಲ್ಲಿ ಮೂದಲಿಸಿದರೂ ನಾವು ಭಾರತೀಯರಾಗಿ, ದೇಶಭಕ್ತರಾಗಿಯೇ ಬದುಕುತ್ತೇವೆ. ದೇಶಪ್ರೇಮದ ಪಾಠ ನಾವು ಈಶ್ವರಪ್ಪರಿಂದ ಕಲಿಯಬೇಕಾಗಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಾಹುಲ್ ಹಮೀದ್, ಜಿ.ಪಂ. ಸದಸ್ಯ ಯು.ಪಿ. ಇಬ್ರಾಹೀಂ, ಮಾಜಿ ಕಾರ್ಪೊರೇಟರ್ ಅಬ್ದುಲ್ ರವೂಫ್, ಎನ್‌ಎಸ್‌ಯುಐನ ಸವದ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *