Header Ads
Breaking News

ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ : ಇಬ್ಬರು ಆರೋಪಿಗಳ ಬಂಧನ

ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಅಪಚಾರ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳ ಬಂಧನ ಮಾಡಿದ್ದೇವೆ. ಮಂಗಳೂರಿನ ಜೋಕಟ್ಟೆ ನಿವಾಸಿಗಳಾದ ಅಬ್ದುಲ್ ರಹೀಂ, ಅಬ್ದುಲ್ ತೌಫೀಕ್ ಬಂಧಿತ ಆರೋಪಿಗಳಾಗಿದ್ದಾರೆ. ಮೂರು ತಿಂಗಳಲ್ಲಿ ನಾಲ್ಕೈದು ಪ್ರಕರಣ ಬೆಳಕಿಗೆ ಬಂದಿತ್ತು. ಕಾಣಿಕೆ ಹುಂಡಿಗಳಿಗೆ ಕಾಂಡೋಮ್, ಅಶ್ಲೀಲ ಬರಹಗಳ ಚೀಟಿ ಹಾಕಿ ದುಷ್ಕೃತ್ಯ ಎಸಗುತ್ತಿದ್ದರು. ಹಲವು ತನಿಖೆ ನಡೆಸಿದ್ರು ಆರೋಪಿಗಳ ಸುಳಿವು ಸಿಕ್ಕಿರಲಿಲ್ಲ. ಪಾಂಡೇಶ್ವರ, ಕದ್ರಿ, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿನ್ನೆ ಎಮ್ಮೆಕೆರೆ ಕೊರಗಜ್ಜ ದೈವಸ್ಥಾನಕ್ಕೆ ಇಬ್ಬರು ಬಂದಿದ್ದಾರೆ. ಈ ಸಂಬಂಧ ಮಾಹಿತಿ ಪಡೆದು ಇಬ್ಬರನ್ನು ಬಂಧಿಸಿದ್ದೇವೆ. ತನಿಖೆಯಲ್ಲಿ ಮಾಡಿರುವ ಕೃತ್ಯಗಳ ಬಗ್ಗೆ ಆರೋಪಿಗಳು ಹೇಳಿಕೊಂಡಿದ್ದಾರೆ. ನವಾಝ್ ಎಂಬ ಸ್ನೇಹಿತ ದೈವಸ್ಥಾನಕ್ಕೆ ಕರೆದುಕೊಂಡು ಹೋಗುತ್ತಿದ್ದ ಎಂಬುದನ್ನು ಕೂಡಾ ಹೇಳಿದ್ದಾರೆ. ನವಾಝ್ ಮಂತ್ರವಾದಿ ಎಂಬಂತೆ ತನ್ನನ್ನು ತಾನೂ ಬಿಂಬಿಸಿಕೊಂಡಿದ್ದ. ಕೃತ್ಯವೆಸಗಿದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ. ನವಾಝ್ ರಕ್ತವಾಂತಿ, ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಸಾವಿಗಿಂತ ಮೊದಲು ಕೊರಗಜ್ಜ ಶಾಪವಿದೆ ಎನ್ನುವಂತೆ ಅನಿಸಿಕೆ ಹಂಚಿಕೊಂಡಿದ್ದ. ನವಾಝ್ ಸಾವಿನ ಬಳಿಕ ತೌಫೀಕ್ ಗೂ ಅನಾರೋಗ್ಯ ಸಮಸ್ಯೆ ಕಾಡಿತ್ತು. ಹೀಗಾಗಿ ದೈವಸ್ಥಾನಕ್ಕೆ ತಪ್ಪು ಕಾಣಿಕೆ ಹಾಕೋದಿಕ್ಕೆ ಬಂದಿದ್ರು. ಸದ್ಯ ಇಬ್ಬರನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *