Header Ads
Breaking News

ದ್ವಿತೀಯಿ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ, ದ.ಕ ಜಿಲ್ಲೆ ಪ್ರಥಮ ಸ್ಥಾನ

ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿವೆ. ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದಿದ್ದರೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 90.71% ಫಲಿತಾಂಶ ದಾಖಲಾಗಿದ್ದು ಪ್ರಥಮ ಸ್ಥಾನವನ್ನು ಹಂಚಿಕೊಂಡಿವೆ. ಮೂರನೇ ಸ್ಥಾನದಲ್ಲಿರುವ ಕೊಡಗು ಜಿಲ್ಲೆಯಲ್ಲಿ 81.53% ಉತ್ತರ ಕನ್ನಡ ಜಿಲ್ಲೆಯಲ್ಲಿ 80;97 % ಪಡೆದು ನಾಲ್ಕನೇ ಸ್ಥಾನದಲ್ಲಿದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 79.11 % ಫಲಿತಾಂಶ ದಾಖಲಿಸುವ ಮೂಲಕ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಕೊನೆಯ ಸ್ಥಾನದಲ್ಲಿರುವ ವಿಜಯಪುರದಲ್ಲಿ 54.22% ಫಲಿತಾಂಶ ದಾಖಲಾಗಿದೆ.s

Related posts

Leave a Reply

Your email address will not be published. Required fields are marked *