Header Ads
Header Ads
Breaking News

ದ.ಕ. ಜಿಲ್ಲಾಡಳಿತದಿಂದ ಪ್ರಕೃತಿ ಸಂರಕ್ಷಣಾ ದಿನಾಚರಣೆ ಜಿಲ್ಲಾ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮ

 

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಪ್ರಕೃತಿ ಸಂರಕ್ಷಣಾ ದಿನಾಚರಣೆ ಮತ್ತು ಜಿಲ್ಲಾ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳೂರಿನ ಪುರಭವನದಲ್ಲಿ ನಡೆಯಿತು.

ಇನ್ನೂ ಸಭಾ ಕಾರ್ಯಕ್ರಮವನ್ನು ಅರಣ್ಯ , ಪರಿಸರ ಮತ್ತು ಜೀವಿ ಶಾಸ್ತ್ರ ಸಚಿವ ರಮಾನಾಥ್ ರೈ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವ್ರು, ಪರಿಸರ ರಕ್ಷಣೆ ಬಗೆ ಜನಜಾಗೃತಿ ಮೂಡಿಸುವ ಕೆಲಸವಾಗಬೇಕು. ಈ ಬಗೆ ಪರಿಸರ ಇಲಾಖೆ ಜವಾಬ್ದಾರಿಯುತವಾಗಿ ಕೆಲ್ಸ ಮಾಡಬೇಕು ಅಂತಾ ಹೇಳಿದ್ರು. ಈ ವೇಳೆ ಮೇಯರ್ ಕವಿತಾ ಸನಿಲ್ , ಶಾಸಕ ಜೆ.ಆರ್.ಲೋಬೋ ,ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್,ಹಿರಿಯ ಸಿವಿಲ್ ನ್ಯಾಯಾಧೀಶ ಮಲ್ಲನಗೌಡ,ಖ್ಯಾತ ಚಲನಚಿತ್ರ ನಟ ಸುರೇಶ್ ಹೆಬ್ಲಿಕರ್, ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ಮತ್ತಿತರ ಉಪಸ್ಥಿತರಿದ್ದರು.ಇದೇ ವೇಳೆ ಗಣ್ಯರು ಸೇರಿದಂತೆ ಸಾರ್ವಜನಿಕರು ಪರಿಸರ ರಕ್ಷಣೆಯ ಬಗೆ ಪ್ರತಿಜ್ಞೆಯನ್ನು ಸ್ವೀಕರಿಸಿದರು. ಅಲ್ಲದೇ ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ಹಾಗೂ ಜಿಲ್ಲಾ ಪರಿಸರ ಪ್ರಶಸ್ತಿಯನ್ನು ಸಚಿವರು ವಿತರಿಸಿದ್ರು.
ವರದಿ: ನಾಗೇಶ್ ಕಾವೂರು

Related posts

Leave a Reply