Header Ads
Breaking News

ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. ಅಧಿಕಾರ ಸ್ವಿಕರಿಸಲಿದ್ದಾರೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ ರೂಪೇಶ್ ಅವರನ್ನು ಬೆಂಗಳೂರಿನ ಇಡಿಸಿಎಸ್ ಡೈರೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದರು.ಜಿಲ್ಲೆಯಲ್ಲಿ 11 ತಿಂಗಳ ತನಕ ಸೇವೆಯನ್ನು ಸಲ್ಲಿಸಿದ್ದ ಇವರು ಮಂಗಳೂರು ಗಲಭೆ ನಿಯಂತ್ರಣಕ್ಕೆ ಹೆಚ್ಚಿನ ಶ್ರಮವಹಿಸಿದ್ದರು.

Related posts

Leave a Reply

Your email address will not be published. Required fields are marked *