Header Ads
Breaking News

ದ.ಕ. ಜಿಲ್ಲಾ ಕಾಂಗ್ರೆಸ್ ನಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆ

ಮಂಗಳೂರು : ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾಂಗ್ರೆಸ್ ಮುಖಂಡರು ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು, ಖಲಿಸ್ತಾನ ಪ್ರತ್ಯೇಕವಾದಿಗಳ ವಿರುದ್ಧ ಕೈಗೊಂಡ ಆಪರೇಷನ್ ಬ್ಲೂ ಸ್ಟಾರ್ ಕಾರ್ಯಾಚರಣೆಯೇ ಇಂದಿರಾ ಗಾಂಧಿ ಅವರ ಪ್ರಾಣಕ್ಕೂ ಕುತ್ತಾಯಿತು ಎಂದರು. ಮಾಜಿ ಶಾಸಕ ಜೆ.ಆರ್. ಲೋಬೋ ಮಾತನಾಡಿ, ಇಂದಿರಾ ಗಾಂಧಿ ಅವರ ಯೋಜನೆಗಳನ್ನ ಗ್ರಾಮ ಗ್ರಾಮಕ್ಕೆ ತಲುಪಿಸುವ ಕೆಲಸ ಕಾಂಗ್ರೆಸ್ ನಿಂದ ಆಗಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈ, ಮಿಥುನ್ ರೈ, ಶಶಿಧರ ಹೆಗ್ಡೆ, ಅಬ್ದುಲ್ ರವೂಫ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *