Header Ads
Breaking News

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳೂರಿನಲ್ಲಿ ವನಮಹೋತ್ಸವ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಮಂಗಳೂರಿನ ಲೇಡಿಹಿಲ್ ವೃತ್ತದ ಬಳಿ ಶಾಸಕ ವೇದವ್ಯಾಸ ಕಾಮತ್ ಅವರು ಗಿಡ ನೆಟ್ಟು ನೀರುಣಿಸಿ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಇದೇ ವೇಳೆ ಮಾತನಾಡಿದ ಶಾಸಕರು ಪತ್ರಕರ್ತ ಮಿತ್ರರು ಒಂದೊಳ್ಳೆಯ ಕಾರ್ಯಕ್ರಮ ಆಯೋಜಿಸಿದ್ದಾರೆ. ಮಂಗಳೂರಿನಲ್ಲಿ ವಿವಿಧ ಸಂಘ ಸಂಸ್ಥೆಗಳು ಸಹ ಇಂತಹ ಕಾರ್ಯಕ್ರಮವನ್ನು ಕೈಗೊಂಡರೆ ಪರಿಸರ ಉಳಿಸುವ ಮತ್ತು ಪೋಷಿಸುವ ಕಾರ್ಯವಾಗುತ್ತದೆ ಎಂದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ ಕರಿಕ್ಕಳನ್, ವಲಯ ಅರಣ್ಯ ಆಧಿಕಾರಿ ಪಿ.ಶ್ರೀಧರ್, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಎಚ್ ಆರ್ ನಾಯ್ಕ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *