Header Ads
Breaking News

ದ.ಕ ಜಿಲ್ಲಾ ಗೃಹರಕ್ಷಕ ಕಚೇರಿಗೆ 2 ಬೋಟ್ ಹಸ್ತಾಂತರ

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಘಟಕ ವತಿಯಿಂದ ಜಿಲ್ಲಾ ಗೃಹರಕ್ಷಕ ದಳ ಕಚೇರಿಗೆ ಸುರಕ್ಷತಾ 2 ಬೋಟುಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ಜರುಗಿತ್ತು. ನಗರದ ಮೇರಿಹಿಲ್‍ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಗೃಹರಕ್ಷಕ ದಳ ಸಮಾದೇಷ್ಟರಾದ ಡಾ| ಮುರಳಿ ಮೋಹನ್ ಚೂಂತಾರು ಮಾತನಾಡಿ, ಪ್ರವಾಹ ರಕ್ಷಣಾ ಸಂದರ್ಭದಲ್ಲಿ ಬೋಟ್‍ಗಳು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ರು. ಈ ವೇಳೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ವಿಜಯ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಉಪ ಸಮಾದೇಷ್ಟರಾದ ರಮೇಶ್ , ಕಚೇರಿ ಅಧೀಕ್ಷಕರಾದ ರತ್ನಾಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *