Header Ads
Header Ads
Breaking News

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ:ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಾಥಾ

ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಹಾಗೂ ನಿವೃತ್ತ ಸೈನಿಕರಿಗೆ ಕಾಯ್ದಿರಿಸಿದ ಜಮೀನನ್ನು ಅವರೀಗೆ ನೀಡಬೇಕು ಎಂದು ಆಗ್ರಹಿಸಿ ದಕ್ಷಿಣಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ಜನವರಿ 7 ರಂದು ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ.
ಬಂಟ್ವಾಳ ತಾಲೂಕಿನ ವಿಟ್ನದಿಂದ ಹೊರಡುವ ಈ ಜಾಥಾ ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಹಾಗೂ ಜಿಲ್ಲಾ ಪಂಚಾಯತ್ ಕಛೇರಿವರೆಗೆ ನಡೆಯಲಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಸಮಿತಿ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Related posts

Leave a Reply