Header Ads
Header Ads
Breaking News

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯಿಂದ ಕಾಲ್ನಡಿಗೆ ಜಾಥಾ:ಹಲವಾರು ಬೇಡಿಕೆ ಮುಂದಿಟ್ಟು ಮೆರವಣಿಗೆ

ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯವರು ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜನವರಿ ೭ರಂದು ವಿಟ್ಲದಿಂದ ಜಿಲ್ಲಾಧಿಕರಿಗಳ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಬಿ.ಕೆ. ಸೇಸಪ್ಪ ಬೆದ್ರಕಾಡು ಮಾಹಿತಿ ನೀಡಿ, ಸಂಘಟನೆ ವತಿಯಿಂದ ಪರಿಶಿಷ್ಠ ಜಾತಿ ಪಂಗಡಕ್ಕೆ ಮತ್ತು ನಿವೃತ್ತ ಸೈನಿಕರಿಗೆ ಕಾಯ್ದಿರಿಸದ ಮತ್ತು ಅಳತೆ ಮಾಡಿರುವ ಜಮೀನನ್ನು ಒದಗಿಸುವಂತೆ ಹಾಗೂ ಸರಕಾರಿ ಮತ್ತು ಸರಕಾರದ ಸ್ವಾಮ್ಯಕ್ಕೆ ಒಳಪಡುವ ಇಲಾಖೆಗಳಲ್ಲಿ ಸುಮಾರು ವರ್ಷಗಳಿಂದ ಹೊರಗುತ್ತಿಗೆ ನೌಕರರಾಗಿ ದುಡಿಯುತ್ತಿರುವ ಪರಿಶಿಷ್ಠ ಜಾತಿ ಪಂಗಡದ ಮತ್ತು ಇತರರನ್ನು ಖಾಯಂಗೊಳಿಸುವಂತೆ, ವೇತನ ಹೆಚ್ಚಿಸುವಂತೆ ಹೀಗೆ ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಜನವರಿ 7ರಂದು ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದ್ದೇವೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿ ಸರಕಾರವನ್ನು ಒತ್ತಾಯಿಸಲಾಗುವುದು ಎಂದರು.
ಈ ಸಂದರ್ಭ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಯು. ವಿಟ್ಲ, ಸೋಮಪ್ಪ ನಾಯ್ಕ್, ಗೋಪಾಲ್ ಕೆ. ಕುಶಾಲಪ್ಪ ಹಾಜರಿದ್ದರು.

Related posts

Leave a Reply