Header Ads
Breaking News

ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ಅಟಲ್ ಜೀ ಸ್ಮರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ ಮಂಗಳೂರು ನಗರದ ಪಿವಿಎಸ್ ಬಳಿ ಇರುವ ಟಿವಿ ರಮಣ ಪೈ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಕೃಷಿ ಹಾಗೂ ಮೀನುಗಾರಿಕೆಗೆ ವಿಶೇಷ ಒತ್ತು ನೀಡುವ ಮೂಲಕ ಪ್ರಧಾನ ಮಂತ್ರಿಗಳು ವಿವಿಧ ಯೋಜನೆಗಳನ್ನ ಜಾರಿಗೊಳಿಸಿದ್ದಾರೆ. ದಲ್ಲಾಳಿಗಳ ಹಸ್ತಕ್ಷೇಪ ತಪ್ಪಿದ ರೈತರು ನೇರ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೇ ರೈತರನ್ನ ಗುರುತಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದ್ದಾರೆ ಎಂದರು. ಇದೇ ಸಂದರ್ಭ ದೆಹಲಿಯಿಂದ ನೇರ ಪ್ರಸಾರ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನ ಗಣ್ಯರು ಸೇರಿದಂತೆ ಕಾರ್ಯಕರ್ತರು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಮೇಯರ್ ದಿವಾಕರ್ ಪಾಂಡೇಶ್ವರ , ಜಿಲ್ಲಾಧ್ಯಕ್ಷ ವಿ.ಸುದರ್ಶನ್ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 500 ಕ್ಕೂ ಮಿಕ್ಕ ಕಾರ್ಯಕರ್ತರು ಹಸಿರು ಶಾಲು ಹಾಕಿಕೊಂಡು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *