Header Ads
Header Ads
Breaking News

ದ.ಕ. ಜಿಲ್ಲಾ ಮಟ್ಟ, ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗೆ ಅದ್ಧೂರಿ ಚಾಲನೆ

ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ನೇತೃತ್ವದಲ್ಲಿ ನಡೆಯುತ್ತಿರುವ ದ.ಕ.ಜಿಲ್ಲಾ ಮಟ್ಟ, ಕರ್ನಾಟಕ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಅದ್ಧೂರಿ ಚಾಲನೆ ದೊರೆಯಿತು.ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ನೇತೃತ್ವದಲ್ಲಿ ಮತ್ತು ಕರ್ನಾಟಕ ಕುಸ್ತಿ ಸಂಘ ಮತ್ತು ದ.ಕ.ಜಿಲ್ಲಾ ಅಮೆಚೂರ್ ಕುಸ್ತಿ ಸಂಘದ ಸಹಯೋಗದಲ್ಲಿ ಮಂಗಳೂರಿನ ಸುರತ್ಕಲ್ ಬೀಚ್ ನಲ್ಲಿ ಎರಡು ದಿನಗಳ ಕಾಲ ನಡೆಯುವ ದ.ಕ.ಜಿಲ್ಲಾ ಮಟ್ಟದ ತುಳುನಾಡು ಕೇಸರಿ, ತುಳುಕುಮಾರ್, ತುಳುನಾಡ ಕುವರಿ, ಮಾಸ್ಟರ್ ಶಿವಾಜಿ ಕುಸ್ತಿ ಸ್ಪರ್ಧೆ, ಕರ್ನಾಟಕ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಅದ್ಧೂರಿ ಚಾಲನೆ ದೊರೆಯಿತು. ಗಣ್ಯರು ಅಖಾಡಕ್ಕೆ ಪೂಜೆ ಸಲ್ಲಿಸುವ ಮೂಲಕ ಕುಸ್ತಿ ಪಂದ್ಯ ಆಟಕ್ಕೆ ಚಾಲನೆ ನೀಡಿದರು. ಬಳಿಕ ಸಸಿಹಿತ್ಲು ವಿನ ಮುಂಬೈ ನಿಖಿಲ್ ಕೀರ್ತಿ ಸಾಲ್ಯಾನ್ ವೇದಿಕೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಕುಸ್ತಿ ಎನ್ನುವುದು ನಮ್ಮ ಸಾಂಪ್ರದಾಯಿಕ ಕ್ರೀಡೆ. ಇದನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ತಲುಪಿಸುತ್ತಿರುವ ಆಂಜನೇಯ ಗುಡಿ, ವ್ಯಾಯಾಮ ಶಾಲೆಯ ಕಾರ್ಯ ಶ್ಲಾಘನೀಯ. ಕುಸ್ತಿ ಇಂದು ಅನೇಕ ಬದಲಾವಣೆ ಗಳನ್ನು ಕಂಡಿದೆ ಎಂದು ಕುಸ್ತಿಯ ಬಗ್ಗೆ ಮಾಹಿತಿ ನೀಡಿದರು. 

ಬಳಿಕ ಮಾತನಾಡಿದ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ, ಕುಸ್ತಿ ಇಂದಿನ ದಿನಗಳಲ್ಲಿ ಪ್ರಾಮುಖ್ಯತೆ ಯನ್ನು ಪಡೆಯುತ್ತಿದೆ. ಇದು ಸಂತಸದಾಯಕ ವಿಚಾರ. ಇಂತಹ ಕುಸ್ತಿ ಪಂದ್ಯಾಟವನ್ನು ಆಯೋಜಿಸು ಮೂಲಕ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಅಧ್ಯಕ್ಷ ವಿನೋದ್ ಕುಮಾರ್ ಮತ್ತು ಅವರ ತಂಡ ಉತ್ತಮ ಕೆಲಸ ಮಾಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಂಬೈ ಬಿಲ್ಲವರ ಅಸೋಸಿಯೇಷನ್ ನ ಅಧ್ಯಕ್ಷ ಚಂದ್ರಶೇಖರ ಎಸ್. ಪೂಜಾರಿ, ಉದ್ಯಮಿ ಅನಿಲ್ ಸಾಲ್ಯಾನ್ ಮುಂಬೈ, ಕಾರ್ಡೋಲಿಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ, ಮಂಗಳೂರು ವಿವಿ ಮಾಜಿಸಿಂಡಿಕೇಟ್ ಸದಸ್ಯ ಶ್ರೀಕರ್ ಪ್ರಭು, ಜಿ.ಪಂ. ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಪಂಚಾಯತ್ ಸದಸ್ಯೆ ಚಿತ್ರಾ ಸುಕೇಶ್, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆ ಮುಂಬೈ ಘಟಕ ಸಂಚಾಲಕ ಅನಿಲ್ ಕುಮಾರ್, ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಅಧ್ಯಕ್ಷ ವಿನೋದ್ ಕುಮಾರ್, ಉಪಾಧ್ಯಕ್ಷ ಸಂತೋಶ್ ಸಸಿಹಿತ್ಲು, ಸಂಘಟನಾ ಕಾರ್ಯದರ್ಶಿ ಶೋಭೇಂದ್ರ ಸಸಿಹಿತ್ಲು, ಆಂಜನೇಯ ಕ್ರಿಕೆಟರ್ಸ್ ಅಧ್ಯಕ್ಷ ರಿತೇಶ್ ಸಾಲ್ಯಾನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಬಳಿಕ ವಿವಿಧ ವಿಭಾಗಗಳಲ್ಲಿ ಕುಸ್ತಿ ಪಂದ್ಯಾಟ ಜರುಗಿತು.

Related posts

Leave a Reply