Header Ads
Breaking News

ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ : ಜ.31ರಂದು ನೂತನ ಸಮಿತಿಯ ಪದಗ್ರಹಣ ಮತ್ತು ಕುಲಾಲ ಸಮ್ಮಿಲನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘಕ್ಕೆ 94 ವರ್ಷ ಪೂರೈಸಿದೆ. ಈ ಸಂಭ್ರಮದಲ್ಲಿ ಕುಲಾಲರ ಮಾತೃ ಸಂಘದ ನೂತನ ಸಮಿತಿಯ ಪದಗ್ರಹಣ ಮತ್ತು ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮತ್ತು ಹೊರನಾಡ ಕುಲಾಲ ಬಾಂಧವರ ಸಮ್ಮಿಲನ ಜನವರಿ 31ರಂದು ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೂತನ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಅವರು, ಜನವರಿ 31ರಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಜರಾಯಿ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಎಸ್. ಅಂಗಾರ, ಮಾಜಿ ಸಚಿವ ರಮಾನಾಥ ರೈ, ಮನಪಾ ಮೇಯರ್ ದಿವಾಕರ್ ಪಾಂಡೇಶ್ವರ, ಶಾಸಕರಾದ ವೇದವ್ಯಾಸ್ ಕಾಮತ್, ಡಾ. ವೈ ಭರತ್ ಶೆಟ್ಟಿ, ಯು.ಟಿ. ಖಾದರ್, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಸಂಜೀವ ಮಠಂದೂರು, ಹರೀಶ್ ಪೂಂಜಾ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾಮಾಜದ ವಿವಿಧ ಪ್ರತಿಭೆಗಳ ಸಾಂಸ್ಕøತಿಕ ವೈವಿದ್ಯವೂ ನಡೆಯಲಿದೆ.
ಆನಂತರ ಕುಲಾಲ ಸಮ್ಮಿಲನ ಸ್ವಾಗತ ಸಮಿತಿಯ ಸಂಚಾಲಕರಾದ ಗಿರೀಶ್ ಕೆ.ಎಚ್. ಅವರು, ಜನವರಿ 31ರಂದು ಕುಲಾಲ ಮಾತೃಸಂಘದ ಪದಗ್ರಹಣ ಮತ್ತು ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಈ ಬಾರಿ ಕುಲಾಲ ಮಾತೃಸಂಘದ ಅಧ್ಯಕ್ಷರನ್ನಾಗಿ ಮಯೂರ್ ಉಳ್ಳಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಕುಲಾಲ ಬಾಂಧವರ ಸಮ್ಮಿಲನ ಎಂಬ ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯಡಿಯಲ್ಲಿ ಒಟ್ಟು ಸೇರಲಿದ್ದಾರೆ ಎಂದು ಹೇಳಿದರು.


ಈ ಸಂದರ್ಭ ಈ ಸಂದರ್ಭ ಶ್ರೀ ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪುರುಷೋತ್ತಮ ಕುಲಾಲ್ ಕಲ್ಬಾವಿ, ಸಮುದಾಯದ ಮುಖಂಡರಾದ ಅನಿಲ್ ದಾಸ್, ದಯಾನಂದ್ ಅಡ್ಯಾರ್, ಜೈರಾಜ್ ಪ್ರಕಾಶ್, ಚಂದ್ರಕಾಂತ್, ಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *