Header Ads
Header Ads
Header Ads
Breaking News

ಕಾಂಗ್ರೆಸ್ ಟಿಕೆಟ್ ಕುರಿತು ಬ್ಲಾಕ್ ಸಮಿತಿಗೆ ಮಾಹಿತಿ ಇಲ್ಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಪ್ರತಿಕ್ರಿಯೆ

ಪುತ್ತೂರು: ಹಿರಿಯ ಮತ್ತು ಅನುಭವಿ ಕಾಂಗ್ರೆಸ್ ನಾಯಕಿಯಾಗಿರುವ ದಿವ್ಯಪ್ರಭಾ ಚಿಲ್ತಡ್ಕ ಪುತ್ತೂರು ವಿಧಾನಸಭಾ ಕಾಂಗ್ರೆಸ್ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಇಷ್ಟಕ್ಕೂ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಈ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಎಂಬ ಕುರಿತು ಮಾಹಿತಿ ಇಲ್ಲ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಅವರ ಬಳಿ ಪತ್ರಕರ್ತರು ಪುತ್ತೂರು ವಿಧಾನಸಭಾ ಕ್ಷೇತ್ರದ ಮುಂಬರುವ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಕುರಿತು ಪ್ರಶ್ನಿಸಿದಾಗ ಮೇಲಿನಂತೆ ಉತ್ತರಿಸಿದರು.ಪುತ್ತೂರಿನಲ್ಲಿ 20 ವರ್ಷಗಳಿಂದ ಕಾಂಗ್ರೆಸ್‌ಗೆ ಅಧಿಕಾರವಿರಲಿಲ್ಲ. ಕಳೆದ ಚುನಾವಣೆಯಲ್ಲಿ ಹಾಲಿ ಶಾಸಕಿ ಶಕುಂತಳಾ ಟಿ ಶೆಟ್ಟಿಯವರು ಕಾಂಗ್ರೆಸನ್ನು ಮರಳಿ ಅಧಿಕಾರಕ್ಕೆ ತಂದಿದ್ದಾರೆ. ಶಾಸಕಿಯಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದು ವಿವಾದರಹಿತವಾಗಿ ಉತ್ತರಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವೇದನಾಥ ಸುವರ್ಣ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಎ.ಬಿ. ವೇಗಸ್ ಉಪಸ್ಥಿತರಿದ್ದರು.

Related posts

Leave a Reply