Header Ads
Breaking News

ದ.ಕ. ಜಿಲ್ಲೆಯಲ್ಲಿ ಒಂದೇ ದಿನ ಮೂವರು ಬಲಿ- ಜಿಲ್ಲೆಯಲ್ಲಿ ಆತಂಕ

ಕರಾವಳಿಯಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಮುಂದುವರಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಅನಾರೋಗ್ಯದಿಂದಾಗಿ ಹೃದಯಾಘಾತದಿಂದ ಮೃತಪಟ್ಟ ವೃದ್ದೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮಾತ್ರವಲ್ಲದೆ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತ್ತಿಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸೋಂಕಿಗೆ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.ಅನಾರೋಗ್ಯದಿಂದಾಗಿ ಸುಳ್ಯದ ಕೆರೆಮೂಲೆಯ ನಿವಾಸಿಯಾಗಿರುವ ವೃದ್ದೆಯನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಯ ಸಿಬ್ಬಂದಿಗಳನ್ನು ಕೊರೊನಾ ತಪಾಸಣೆಗೆ ಒಳಪಡಿಸಿದಾಗ ಐಸಿಯುನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಗೆ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ವೃದ್ದೆಯ ಗಂಟಲು ದ್ರವದ ಪರೀಕ್ಷೆಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು.ಆದ್ರೆ ಕೊರೊನಾ ವರದಿ ಕೈ ಸೇರುವ ಮೊದಲು ವೃದ್ದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಸೋಂಕಿಗೆ ಬಲಿಯಾಗಿರುವುದು ಕರಾವಳಿಯ ಜನತೆ ಆತಂಕದಲ್ಲಿದ್ದಾರೆ.

Related posts

Leave a Reply

Your email address will not be published. Required fields are marked *