Header Ads
Breaking News

ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ : ಕುಲಶೇಖರದ 80 ವರ್ಷದ ವೃದ್ಧೆ ಮೃತ್ಯು

ಗುರುವಾರವೂ ಕರಾವಳಿಯ ಪಾಲಿಗೆ ಕಹಿಯಾಗಿ ಪರಿಣಮಿಸಿದೆ. ಬುಧವಾರ ಸೋಂಕಿನಿಂದ ಬಳಲುತ್ತಿದ್ದ ಬೋಳೂರಿನ 58ರ ಮಹಿಳೆ ಸಾವಿಗೀಡಾಗಿದ್ದು, ಗುರುವಾರ ಕೂಡ ಕೊರೊನಾ ಸೋಂಕಿನಿಂದ ಕೋವಿಡ್ ಆಸ್ಪತ್ರೆಯಲ್ಲಿರುವ ಕುಲಶೇಖರದ 80ರ ವೃದ್ಧೆಯ ಮೃತಪಟ್ಟಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಮೃತಪಟ್ಟವರೆಲ್ಲ ಮಹಿಳೆಯರೇ ಆಗಿದ್ದು ಎಲ್ಲರೂ ಫಸ್ಟ್ ನ್ಯೂರೋ ನಂಟು ಹೊಂದಿದ್ದರು ಎನ್ನುವುದು ಆತಂಕಕಾರಿ ವಿಚಾರ. ಕೊರೋನಾ ಸೋಂಕಿನಿಂದ ಕೋವಿಡ್ ಆಸ್ಪತ್ರೆಯಲ್ಲಿದ್ದ ಮೃತಪಟ್ಟ ಕುಲಶೇಖರದ 80ರ ವೃದ್ಧೆಯ ಆರೋಗ್ಯ ಸ್ಥಿತಿ ಕೂಡ ಗಂಭೀರವಾಗಿದ್ದು ಅವರಿಗೆ ಹಲವು ದಿನಗಳಿಂದ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದ್ದು. ಆದರೆ ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾ ಪ್ರಕರಣ 34ಕ್ಕೆ ಏರಿಕೆಯಾಗಿದೆ. ಮೃತಪಟ್ಟವರೆಲ್ಲ ಮಹಿಳೆಯರೇ ಆಗಿದ್ದಾರೆ. ಸಕ್ರಿಯ 17 ಪ್ರಕರಣಗಳಿದ್ದು, 14 ಮಂದಿ ಗುಣಮುಖರಾಗಿದ್ದಾರೆ. . 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಸ್ಟ್ ನ್ಯೂರೋ ಆಸ್ಪತ್ರೆ ಸಂಪರ್ಕದಿಂದ ಸೋಂಕಿತರಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

Related posts

Leave a Reply

Your email address will not be published. Required fields are marked *