Header Ads
Breaking News

ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿ- ಆತಂಕದಲ್ಲಿ ಕರಾವಳಿಯ ಜನತೆ

ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಮಂಗಳೂರಿನಲ್ಲಿ ಇಂದು ಒಂದೇ ದಿನ ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಮಂಗಳೂರು ಜನತೆಯಲ್ಲಿ ಆತಂಕ ಹೆಚ್ಚಾಗಿದೆ. ಭಟ್ಕಳ ಮೂಲದ 31ವರ್ಷದ ಯುವಕ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ. ಅಧಿಕ ರಕ್ತದೊತ್ತಡದಿಂದ ಬಳಲುತಿದ್ದ. ಯುವಕ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಮೃತಪಟ್ಟ ಬಳಿಕ ಕೊರೊನಾ ಟೆಸ್ಟ್‍ನಲ್ಲಿ ಆ ಯುವಕನಿಗೆ ಸೋಂಕು ದೃಢಪಟ್ಟಿದೆ.

ಇನ್ನು ಮಂಗಳೂರಿನ ಬೆಂಗ್ರೆ ನಿವಾಸಿ, ಡಯಾಬಿಟಿಸ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ 51 ವರ್ಷದ ಸೋಂಕು ಪೀಡಿದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಆದ್ರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

Related posts

Leave a Reply

Your email address will not be published. Required fields are marked *