Header Ads
Breaking News

ದ.ಕ. ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಬಿಜೆಪಿಯ ಸಿದ್ಧತೆ ಪೂರ್ಣ : ಮಂಗಳೂರಿನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹೇಳಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹೇಳಿದರು.

ಅವರು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 220 ಗ್ರಾಮ ಪಂಚಾಯತ್‍ಗೆ ಬಿಜೆಪಿಯ ಕಾರ್ಯಕರ್ತರು ಸ್ಪರ್ಧೆಯನ್ನು ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಗ್ರಾಮ ಪಂಚಾಯತ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದೇವೆ. ಕಾಂಗ್ರೆಸ್‍ನವರು ಆನೇಕ ಆರೋಪಗಳನ್ನು ಮಾಡುತ್ತಿದ್ದಾರೆ. ಮೂರು ದಶಕಗಳ ಹಿಂದಿನ ವಾತಾವರಣವನ್ನು ಕಾಂಗ್ರೆಸ್ ನೆನೆಪು ಮಾಡಬೇಕಿದೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ತೊರೆದು ಅನೇಕ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್, ಮೂಡಾ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪದ್ಮನಾಭ ಕೊಟ್ಟಾರಿ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *