Header Ads
Header Ads
Breaking News

ದ.ಕ. ಜಿಲ್ಲೆಯಲ್ಲಿ ಜನಸಾಮಾನ್ಯರನ್ನು ಕಾಡುತ್ತಿರುವ ಮರಳು ಸಮಸ್ಯೆ:ಶಾಶ್ವತವಾಗಿ ಪರಿಹರಿಸುವಂತೆ ಒತ್ತಾಯ

ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಜನ ಸಾಮಾನ್ಯರನ್ನು ಕಾಡುತ್ತಿರುವ ಮರಳು ಸಮಸ್ಯೆಯನ್ನು ಶಾಶ್ವಾತವಾಗಿ ಪರಿಹರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ ವತಿಯಿಂದ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

ಕಳೆದ ಹಲವು ತಿಂಗಳಿನಿಂದ ಕರಾವಳಿ ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿ ಉಲ್ಭಣಗೊಂಡಿದೆ. ದ.ಕ. ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮರಳು ನದಿಗಳಲ್ಲಿ ದೊರೆಯುತ್ತಿದ್ದರೂ ಸರಕಾರದ ಧೋರಣೆಯಿಂದಾಗಿ ಮರಳಿನ ಕೃತಕ ಅಭಾವ ಉಂಟಾಗಿದೆ. ಮರಳು ಸಮಸ್ಯೆಯಿಂದಗಿ ನಿರ್ಮಾಣ ಕ್ಷೇತ್ರವು ಸಂಪೂರ್ಣವಾಗಿ ನೆಲಕಚ್ಚಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಸಿಐಟಿಯು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ಮೂರು ವರ್ಷಗಳಿಂದ ಕೃತಕ ಮರಳು ಅಭಾವ ಸೃಷ್ಟಿಯಾಗಿದೆ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಶಾಮೀಲಾತಿಯಿಂದ ಈ ಸಮಸ್ಯೆ ಸೃಷ್ಟಿಯಾಗಿದ್ದು ಮೂರು ಸಾವಿರ ರೂಪಾಯಿಗೆ ಸಿಗುತಿದ್ದ ಮರಳು ಈಗ ಹದಿನೆಂಟು ಸಾವಿರಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.
ರಾತ್ರಿ ವೇಳೆ ಅಕ್ರಮ ಮರಳು ಸಾಗಾಟ ರದ್ದುಗೊಳಿಸಬೇಕು, ಮರಳು ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಪತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಫೆಡರೇಶನ್ ಅಧ್ಯಕ್ಷ ಉದಯಕುಮಾರ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಜಯಂತ ನಾಯಕ ಮತ್ತಿತರರು ಹಾಜರಿದ್ದರು

Related posts

Leave a Reply