Header Ads
Breaking News

ದ.ಕ. ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಕ್ರಮ : ಡಾ| ಕೆ. ಸುಧಾಕರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಎಕ್ರೆಗಿಂತ ಅಧಿಕ ಭೂಮಿ ಹೊಂದಿರುವ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಹಾಗೂ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ನರೇಗಾ ಯೋಜನೆಯಡಿ ಆರೋಗ್ಯ ಸಂಬಂಧಿತ ಕೈತೋಟ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ| ಕೆ. ಸುಧಾಕರ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ 66 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ಬಾಕಿ ಉಳಿದಿರುವ 35 ಕೇಂದ್ರಗಳಿಗೆ ನರೇಗಾ ಯೋಜನೆಯಡಿ ಆವರಣ ಗೋಡೆ ನಿರ್ಮಿಸ ಬೇಕು. ಆಯುಷ್ ಸೇರಿದಂತೆ ಇತರರ ನೆರವಿನಿಂದ ಎಲ್ಲ ಆರೋಗ್ಯ ಕೇಂದ್ರಗಳ ಆವರಣದಲ್ಲಿ ಔಷಧೀಯ ಸಸ್ಯಗಳ ಕೈತೋಟವನ್ನು ಮುಂದಿನ 60 ದಿನದೊಳಗೆ ನಿರ್ಮಿಸಬೇಕು. ಅಲ್ಲಿ ಕುಡಿ ಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿ ಮಾಡಿರಬೇಕು ಎಂದರು. ಆಯುಷ್ಮಾನ್ ಕಾರ್ಡ್ ವಿತರಣೆಯು ಜಿಲ್ಲೆ ಯಲ್ಲಿ ಕುಂಠಿತವಾಗಿರುವ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಒಂದು ಕುಟುಂಬಕ್ಕೆ 5 ಲಕ್ಷ ರೂ. ಪ್ರಯೋಜನ ಸಿಗುವ ಈ ಕಾರ್ಡ್ ಮಾಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆದ್ಯತೆ ನೀಡಬೇಕು.ಜಿಲ್ಲೆಯ ಆರೋಗ್ಯ ಇಲಾಖೆ, ವೆನ್ಲಾಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ವಿವಿಧ ವಿಭಾಗದಲ್ಲಿ ವೈದ್ಯರು, ಅಧಿಕಾರಿಗಳು, ತಜ್ಞರ ಹುದ್ದೆ ಖಾಲಿ ಇದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ರಾಮಚಂದ್ರ ಬಾಯರಿ ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ಜಿಲ್ಲಾಧಿಕಾರಿಯವರಿಗೆ ಸಚಿವರು ಸೂಚಿಸಿದರು.

Related posts

Leave a Reply

Your email address will not be published. Required fields are marked *