Header Ads
Header Ads
Breaking News

ದ.ಕ. ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣ ವರದಿಯಾಗಿಲ್ಲ : ದ.ಕ. ಜಿಲ್ಲಾಧಿಕಾರಿ ಸೂಚನೆ

ದ.ಕ. ಜಿಲ್ಲೆಯಲ್ಲಿ ಮಂಗನಕಾಯಿಲೆಯ ಪ್ರಕರಣಗಳು ವರದಿಯಾಗಿಲ್ಲ. ಆದರೂ ಜಿಲ್ಲಾಡಳಿತ, ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆನರು ಭಯಪಡಬೇಕಾದ ಅಗತ್ಯವಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಹೇಳಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ಮಂಗನಕಾಯಿಲೆಯ ಪ್ರಕರಣಗಳು ವರದಿಯಾಗಿಲ್ಲ. ಎರಡು ಶಂಕಿತ ಪ್ರಕರಣದಲ್ಲಿ ಶಂಕಿತರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ತಪಾಸಣೆಗೆ ಕಳುಹಿಸಲಾಗಿದೆ. ಈ ಬಗ್ಗೆ ಜನರು ಯಾರು ಕೂಡ ಭಯಪಡುವ ಅಗತ್ಯವಿಲ್ಲ. ಆದರೂ ಕೂಡ ಜನರು ಅನಗತ್ಯವಾಗಿ ಅರಣ್ಯ ಪ್ರದೇಶಗಳನ್ನು ಪ್ರವೇಶ ಮಾಡದಂತೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಅವರು, ಜಿಲ್ಲೆಯ ಹಲವೆಡೆ ಮಂಗಗಳು ಸಾವನ್ನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ. ಆದರೆ ಮಂಗಗಳ ಸಾವಿನಿಂದ ಜನರು ಕಂಗೆಡಬೇಕಿಲ್ಲ. ಮಂಗಗಳ ಸಾವಿಗೆ ಹಲವಾರು ಕಾರಣಗಳಿರುತ್ತವೆ. ಸೋಂಕಿನಿಂದಲೇ ಮೃತಪಟ್ಟಿವೆ ಎನ್ನಲಾಗುವುದಿಲ್ಲ. ಆದರೂ ಆರೋಗ್ಯ ಇಲಾಖೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

Related posts

Leave a Reply