Header Ads
Breaking News

ದ.ಕ ಜಿಲ್ಲೆಯಲ್ಲಿ ಮತ್ತೆ ಲಾಕ್‍ಡೌನ್ ವಿಸ್ತರಣೆ ಸುಳಿವು-ಕೋಟ ಶ್ರೀನಿವಾಸ ಪೂಜಾರಿ

ದ.ಕ ಜಿಲ್ಲೆಯಲ್ಲಿ ಈಗಾಗಲೇ ಒಂದು ವಾರಗಳ ಲಾಕ್‍ಡೌನ್ ಜಾರಿಯಾಗಿದ್ದು, ಇದೀಗ ಮತ್ತೆ ಲಾಕ್‍ಡೌನ್ ವಿಸ್ತರಿಸುವ ಕುರಿತು ಕೋಟಾ ಶ್ರೀನಿವಾಸ್ ಪೂಜಾರಿ ಸುಳಿವು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ಲಾಕ್ ಡೌನ್‍ಗೆ ನಾಳೆ ಕೊನೆಯ ದಿನವಾಗಿರುವ ಹಿನ್ನಲೆಯಲ್ಲಿ ಮಂಗಳೌರಾ ಸಂಜೆ ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಬಗ್ಗೆ ಚರ್ಚಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಗೆ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕರಿಂದ ಒತ್ತಾಯ ಕೇಳಿ ಬರುತ್ತಿದೆ. ಈ ಹಿನ್ನಲೆ ಇಂದು ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಜೊತೆ ಲಾಕ್ ಡೌನ್ ವಿಸ್ತರಣೆ ಚರ್ಚಿಸಲಾಗುವುದು. ನಂತರ ನಾಳೆ ಸಿಎಂ ಜೊತೆ ಈ ಕುರಿತಂತೆ ಚರ್ಚೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Related posts

Leave a Reply

Your email address will not be published. Required fields are marked *