Header Ads
Header Ads
Breaking News

ದ.ಕ ಜಿಲ್ಲೆಯಲ್ಲಿ ಶೇ.10.38 ಮತದಾರರ ಪಟ್ಟಿ ಪರಿಶೀಲನೆ ತಪ್ಪು ಮಾಹಿತಿಯಿಂದ ಗೊಂದಲ ಬೇಡ : ಸಿಂಧೂ ರೂಪೇಶ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ಪರಿಶೀಲನೆ ಕಾರ್ಯ ಸೆಪ್ಟಂಬರ್ ಒಂದರಿಂದ ನಡೆಯುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ ಶೇಕಡಾ 10.38 ಮತದಾರರ ಗುರುತಿನ ಚೀಟಿಯನ್ನು ಪರಿಶೀಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಮಾತನಾಡಿ, ಮಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 17,24,458 ಮತದಾರರಿದ್ದು, ಈ ಪೈಕಿ ಇದುವರೆಗೆ 1,79,034 ಮಂದಿ ಮತದಾರರ ಹೆಸರುಗಳನ್ನು ಪಟ್ಟಿಯಲ್ಲಿ ಪರಿಶೀಲನೆ ಮಾಡಲಾಗಿದೆ. ಚುನಾವಣಾ ಆಯೋಗದ ಸೂಚನೆ ಮೇರೆಗೆ ಮತದಾರರ ಪಟ್ಟಿ ಪರಿಶೀಲನೆ ಮಾಡಲಾಗಿದೆ. ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಮತದಾರರ ಪಟ್ಟಿಯಲ್ಲಿ ಸರಿಯಾಗಿದೆಯೇ ಎಂದು ಪರಿಶೀಲನೆ ಮಾಡಿಕೊಳ್ಳಬೇಕೆಂದರು.

ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧತೆಗಳು ನಡೆಯುತ್ತಿದೆ ಎಂದು ಅವರು ಹೇಳಿದ್ರು. ಇನ್ನು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಇಳಿಕೆಯಾಗಿದೆ. ಸೊಳ್ಳೆ ನಿರ್ಮಾಲನಾ ಕಾರ್ಯಾಚರಣೆ ಸ್ಥಗಿತಗೊಂಡಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ರು.

Related posts

Leave a Reply

Your email address will not be published. Required fields are marked *