Header Ads
Header Ads
Breaking News

ದ.ಕ. ಜಿಲ್ಲೆಯಲ್ಲಿ 21,292 ಯುವ ಮತದಾರರು ಸೇರ್ಪಡೆಯಾಗಿದ್ದಾರೆ: ಸಸಿಕಾಂತ್ ಸೆಂಥಿಲ್ ಮಾಹಿತಿ

ಭಾರತ ಚುನಾವಣಾ ಆಯೋಗದ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆ ಹಾಗೂ ಕಾಲೇಜುಗಳಲ್ಲಿ ಹಮ್ಮಿಕೊಂಡ ನೋಂದಣಿ ಹಾಗೂ ವಿಶೇಷ ನೋಂದಣಿ ಸೇರಿದಂತೆ ಪರಿಷ್ಕೃತ ಮತದಾರರ ಪಟ್ಟಿಗೆ 21,292 ಯುವ ಮತದಾರರು ಸೇರ್ಪಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮತದಾರರ ಪಟ್ಟಿಗೆ ಸೇರ್ಪಡೆಯಾದ ಎಲ್ಲಾ ಯುವ ಮತದಾರರಿಗೆ ಜ.25ರಂದು ನಗರದ ಪುರಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮತದಾರರ ಚೀಟಿಯನ್ನು ನೀಡಲಾಗುವುದು ಎಂದರು.

ಇಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 16,97417 ಮತದಾರರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 16,98,868 ಮತದಾರರಿದ್ದು, ಪ್ರಸಕ್ತ ಮತದಾರರ ಪಟ್ಟಿಯಲ್ಲಿ 1,451 ಮತದಾರರು ಕಡಿಮೆಯಾಗಿದ್ದಾರೆ ಎಂದು ಅವರು ಹೇಳಿದರು. ಮತದಾರರ ಸೇರ್ಪಡೆ ಹಾಗೂ ಪಟ್ಟಿಯಿಂದ ಹೆಸರನ್ನು ಕೈಬಿಡುವ ಪ್ರಕ್ರಿಯೆ ಮುಂದಿನ ಚುನಾವಣೆ ಘೋಷಣೆವರೆಗೆ ಮುಂದುವರಿಯಲಿದ್ದು, ಅರ್ಜಿ ಸಲ್ಲಿಸಲು ಅಥವಾ ಆಕ್ಷೇಪ ಸಲ್ಲಿಸಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಈ ಸಂದರ್ಭ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.

Related posts

Leave a Reply