Header Ads
Header Ads
Header Ads
Header Ads
Header Ads
Header Ads
Breaking News

ದ.ಕ. ಜಿಲ್ಲೆಯಾದ್ಯಂತ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ : ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮಂಗಳೂರು, ಬಂಟ್ವಾಳ, ಪುತ್ತೂರು, ವಿಟ್ಲ, ಮೂಡುಬಿದರೆಯಲ್ಲಿ ಮಳೆಯನ್ನು ಲೆಕ್ಕಿಸದೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಧಾರಾಕಾರ ಸುರಿಯುವ ಮಳೆಯ ನಡುವೆ ಮಂಗಳೂರಿನ ನೆಹರೂ ಮೈದಾನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಧ್ವಜಾರೋಹಣ ಮಾಡಿದರು. ಕೊಡೆ ಹಿಡಿದುಕೊಂಡು ಧ್ವಜಾರೋಹಣ ಮತ್ತು ಪೆಂಡಾಲ್‍ನಡಿ ನಿಂತು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪುತ್ತೂರಿನ ಕಿಲ್ಲೆ ಮೈದಾನದ ಬಳಿಯ ಮಂಗಲ್‍ಪಾಂಡೆ ಚೌಕದಲ್ಲಿ ನಡೆದ 73ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಎಸಿ ಕೃಷ್ಣಮೂರ್ತಿ ಅವರು ಸಂದೇಶ ನೀಡಿದರು.
ಬಂಟ್ವಾಳ ತಾಲೂಕು ಮಟ್ಟದ ಸ್ವಾತಂತ್ರೋತ್ಸವವನ್ನು ಬಿ.ಸಿ.ರೋಡಿನ ಮಿನಿ ವಿದಾನಸೌಧದಲ್ಲಿ ವಿಜ್ರಂಭಣೆಯಿಂದ ಆಚರಿಸಲಾಯಿತು. ತಹಶೀಲ್ದಾರ್ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೆರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದು ವಿವಿಧ ತುಕುಡಿಗಳಿಂದ ಧ್ವಜ ವಂದನೆ ಸ್ವೀಕರಿಸಿದರು.
ಮೂಡುಬಿದಿರೆ ಪುರಸಭೆಯಲ್ಲಿ 73ನೇ ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಯನ್ನು ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಧ್ವಜರೋಹಣಗೈಯ್ಯುವ ಮೂಲಕ ಆಚರಿಸಲಾಯಿತು. ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ವಿವಿಧ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ 73ನೇ ವರ್ಷದ ಸ್ವಾತಂತ್ರ್ಯ ಸಂಭ್ರಮವನ್ನಾಚರಿಸಲಾಯಿತು. ಮೂಡುಬಿದಿರೆ ತಹಾಶೀಲ್ದಾರ್ ಅನಿತಾ ಅವರು ಧ್ವಜಾರೋಹಣ ನೆರವೇರಿಸಿದ್ರು. ಶಾಸಕ ಉಮಾನಾಥ ಕೋಟ್ಯಾನ್ ಅವರು ಪಥಸಂಚಲನ ಗೌರವ ಸ್ವೀಕರಿಸಿದರು. ಮೂಡುಬಿದಿರೆ ಮಿಜಾರಿನ ಶೇಖ್ ಮಸ್ಜೀದ್‍ನಲ್ಲಿ 73ನೇ ವರ್ಷದ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಲಾಯಿತು. ಎಡಪದವು ಗ್ರಾ.ಪಂನ ಮಾಜಿ ಅಧ್ಯಕ್ಷ ಮೊಯಿದ್ದೀನ್ ಬಾವ ಧ್ವಜರೋಹಣಗೈದು ಶುಭ ಹಾರೈಸಿದರು.
ವಿಟ್ಲದಲ್ಲೂ 73ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ನಡೆಯಿತು. ಒಕ್ಕೆತ್ತೂರು ದ.ಕ.ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮಹಮ್ಮದ್ ಹಾರೀಸ್ ಸಿ.ಎಚ್ ಧ್ವಜಾರೋಹಣಗೈದರು. ಅದೇ ರೀತಿ ವಿಟ್ಲದ ಸೈಂಟ್ ರೀಟಾ, ವಿಟ್ಲ ಮಾದರಿ ಶಾಲೆ, ವಿಟ್ಲ ಪಂಚಾಯಿತಿ, ವಿವಿಧ ಗ್ರಾಮ ಪಂಚಾಯಿತಿನಲ್ಲಿ ಆಚರಿಸಲಾಯಿತು.

Related posts

Leave a Reply

Your email address will not be published. Required fields are marked *