Header Ads
Breaking News

ದ.ಕ. ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ : ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ ಆರೋಪ

ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಈ ವ್ಯವಸ್ಥೆಗೆ ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಹಿರಿಯ ಅಧಿಕಾರಿಗಳ ಬೆಂಬಲವೂ ಇದೆ ಎಂದು ಕಾಂಗ್ರೇಸ್ ಮುಖಂಡ ಮಹಮ್ಮದ್ ಆಲಿ ಆರೋಪಿಸಿದ್ದಾರೆ. 

ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅವರು ಎರಡು ದಿನಗಳ ಹಿಂದೆ ಪುತ್ತೂರು ತಹಶೀಲ್ದಾರ್ ಚುನಾವಣಾ ಸಂದರ್ಭದಲ್ಲಿ ವಿತರಣೆ ಮಾಡಿದ ಉಪಹಾರದ ಬಿಲ್ ಪಾವತಿಸುವ ವಿಚಾರದಲ್ಲಿ 2.2ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಉಪಹಾರ ವಿತರಣೆ ಮಾಡಿದ ಪುತ್ತೂರಿನ ಪೈ ಕ್ಯಾಟರರ್ಸ್ ನ ದಿನೇಶ್ ಪೈ ಒಂದು ಕಂತಿನ 99ಸಾವಿರ ರೂಪಾಯಿಗಳನ್ನು ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್ ಗೆ ನೀಡಿದ್ದರು. ಇದರ ಜೊತೆಗೆ ಮತ್ತೆ 1.25ಲಕ್ಷ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಪೋಲೀಸರ ಬಲೆಗೆ ಬಿದ್ದಿದ್ದರು. ತಹಶೀಲ್ದಾರ್ ಕಛೇರಿ ಹಾಗೂ ಮಿನಿ ವಿಧಾನ ಸೌಧದಲ್ಲಿರುವ ಎಲ್ಲಾ ಸರಕಾರಿ ಕಛೇರಿಗಳಲ್ಲೂ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದ್ದು, ಸ್ವತ ಪುತ್ತೂರಿನ ಶಾಸಕ ಸಂಜೀವ ಮಠಂದೂರು ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರ ಗಮನಕ್ಕೂ ತಂದಿದ್ದರು. ಆದರೆ ಇಬ್ಬರೂ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಇಂಥಹ ಭ್ರಷ್ಟ ಅಧಿಕಾರಿಗಳ ಬೆನ್ನಿಗೆ ನಿಲ್ಲುವ ಕೆಲಸವನ್ನು ಮಾಡಿದ್ದಾರೆ ಎಂದು ಆರೋಪಿಸಿದ ಅವರು ಸರಕಾರ ಕೂಡಲೇ ಜಿಲ್ಲೆಯ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

Related posts

Leave a Reply

Your email address will not be published. Required fields are marked *