Header Ads
Header Ads
Breaking News

ದ.ಕ.ಜಿ. ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ 2019-20 : ಹಲವು ಸಂಘಟನಗಳ ವತಿಯಿಂದ ಆಯೋಜನೆ

ವಿಟ್ಲ: ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ. ಕ. ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ವಿದ್ಯಾಂಗ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ, ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ 2019-20 ನಡೆಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪಂಚಾಯಿತಿ ಸದಸ್ಯ ಎಂಎಸ್ ಮಹಮ್ಮದ್ ಮಾತನಾಡಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ವಹಿಸಿದ್ದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಜಯಂತ ವಿಟ್ಲ, ಸ್ಥಾಯೀ ಸಮಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಯಶ್ರೀ ಕೋಡಂದೂರು, ಎಂ ಎಸ್ ಮಹಮ್ಮದ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

Related posts

Leave a Reply

Your email address will not be published. Required fields are marked *