

ರಾಜ್ಯ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆ ಆಪ್ತಕಾರ್ಯದರ್ಶಿ ಎ. ವೀ. ಶೆಟ್ಟಿ, ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಸ್ವಾಗತಿಸಿದರು.
ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ. ಮತ್ತಿತರರು ಉಪಸ್ಥಿತರಿದ್ದರು.