Header Ads
Breaking News

ಧಾರ್ಮಿಕ ಕೇಂದ್ರಗಳಲ್ಲಿ ಮತಯಾಚನೆ ಮಾಡುವಂತಿಲ್ಲ: ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಖಡಕ್ ವಾರ್ನಿಂಗ್

ಮತದಾನ ಕೇಂದ್ರಗಳಲ್ಲಿ ಅಥವಾ ಅವುಗಳ ಸಮೀಪದಲ್ಲಿ ಅನುಚಿತವಾಗಿ ನಡೆದುಕೊಳ್ಳುವುದು ಅಪರಾಧವಾಗಿದ್ದು, ಅಂತಹ ಘಟನೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಮತದಾನ ಕೇಂದ್ರಗಳಲ್ಲಿ ಅಥವಾ ಅವುಗಳ ಸಮೀಪದಲ್ಲಿ ಮತ ಕೋರಿಕೆಯನ್ನು ನಿಷೇಧಿಸಲಾಗಿದೆ. ಮತದಾನ ಕೇಂದ್ರದ ಸಮೀಪದ ಆಯುಧವನ್ನು ತೆಗೆದುಕೊಂಡುವುದು ಹೋಗುವುದು ಚುನಾವಣಾ ಅಪರಾಧವಾಗಿದೆ. ಯಾವುದೇ ಕಾರಣಕ್ಕೂ ಮತದಾನ ಕೇಂದ್ರದಿಂದ ಮತಪತ್ರಗಳನ್ನು ಸ್ಥಳಾಂತರಿಸುವಂತಿಲ್ಲ. ಜತೆಗೆ ಮತಪೆಟ್ಟಿಗೆ, ಮತಪತ್ರ, ದಸ್ತಾವೇಜುಗಳು, ಬ್ಯಾಲೆಟ್ ಪೇಪರ್‌ಗಳನ್ನು ಅನಧಿಕೃತವಾಗಿ ನಾಶಗೊಳಿಸಿದ್ದೇ ಆದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಚುನಾವಣೆ ವೇಳೆ ಲಂಚ ನೀಡುವುದು, ಇನ್ನೊಬ್ಬನಂತೆ ನಟಿಸುವುದು, ಸುಳ್ಳು ಹೇಳಿಕೆ ನೀಡುವುದು, ಚುನಾವಣೆಗೆ ಸಂಬಂಧಿಸಿದ ಲೆಕ್ಕಗಳನ್ನು ಇಡದೇ ಎಥೇಚ್ಛವಾಗಿ ಖರ್ಚು ಮಾಡುವುದು ಭಾರತೀಯ ದಂಡ ಸಂಹಿತೆ ಪ್ರಕಾರ ಅಪರಾಧವಾಗಿರುತ್ತದೆ ಎಂದರು.

ಮತದಾನ ಕೇಂದ್ರದ ಒಳಗೆ ಅಥವಾ ಹೊರಗೆ ಯಾವುದೇ ರೀತಿಯ ಗಲಾಟೆ ಮಾಡಿದ್ದೇ ಆದಲ್ಲಿ ಕಾನೂನುನ್ನು ಕೈಗೆ ತೆಗೆದು ಕೊಂಡಂತಾಗುತ್ತದೆ. ಅಂತಹವರ ವಿರುದ್ಧ ಕೇಸು ದಾಖಲಿಸಿ, ದಂಡ ವಿಧಿಸಲಾಗುವುದು. ಚುನಾವಣೆಗೆ ಮುನ್ನ ವಿತರಿಸುವ ವೋಟರ್ಸ್ ಸ್ಲಿಪ್ ಮತದಾನ ಮಾಡಲು ಅಗತ್ಯ ದಾಖಲೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.

Related posts

Leave a Reply

Your email address will not be published. Required fields are marked *