Header Ads
Header Ads
Breaking News

ನಂತೂರಿನಿಂದ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ವಿಳಂಬ. ಮಂಗಳೂರಿನ ಪಂಪ್‌ವೆಲ್ ವೃತ್ತದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ.

ಮಂಗಳೂರಿನ ನಂತೂರುನಿಂದ ತೊಕ್ಕೊಟ್ಟು ವರೆಗಿನ ಮೇಲ್ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಮಂಗಳೂರಿನ ಪಂಪ್ ವೆಲ್ ನಲ್ಲಿ ಮಂಗಳೂರು ದಕ್ಷಿಣ ಮತ್ತು ಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಯಿತು.ಪಂಪ್ ವೆಲ್ ಸರ್ಕಲ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ಯನ್ನು ಶವದ ರೀತಿಯಲ್ಲಿ ಮಲಗಿಸಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಕೇಂದ್ರ ಸರಕಾರದ ವಿರುದ್ದ ಆಕ್ತೋಶ ವ್ಯಕ್ತಪಡಿಸಿದರು.

ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಆರಂಭಿಸಿ ಎಂಟು ವರ್ಷವಾದರೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿದರು.ಪ್ರತಿಭಟನೆಯಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜ, ಮಾಜಿ ಶಾಸಕ ಜೆಆರ್ ಲೋಬೋ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮೊದಲಾದವರು ಪ್ರತಿಭಟನೆ ಯಲ್ಲಿ ಭಾಗಿಯಾಗಿದ್ದರು.

Related posts

Leave a Reply