Header Ads
Header Ads
Breaking News

ನಂತೂರು ಸಂದೇಶ ಪ್ರತಿಷ್ಠಾನದಿಂದ ಸಂದೇಶ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನದಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತೀ ವರ್ಷ ಕೊಡಲ್ಪಡುವ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ಬಾರಿ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸನ್ನ ಹೆಗ್ಗೋಡು ಸಹಿತ ಐವರು ಸಾಧಕರಿಗೆ ಸಂದೇಶ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಂತೂರಿನ ಸಂದೇಶ ಪ್ರತಿಷ್ಠಾನದಲ್ಲಿ ಜರುಗಿತು.

ಮಂಗಳೂರಿನ ನಂತೂರಿನ ಸಂದೇಶ ಪ್ರತಿಷ್ಠಾನದಲ್ಲಿ ಅವರಣದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಕರ್ನಾಟಕ ಪ್ರಾಂತೀಯ ಕೆಥೋಲಿಕ್ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿ ಸಂದೇಶ ಸಂಸ್ಕೃತಿ ಹಾಗೂ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸಂದೇಶ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದೇ ವೇಳೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಮತ್ತು ಸಂದೇಶ ಪ್ರತಿಷ್ಠಾನದ ವಿಶ್ವಸ್ತರು ಅತಿ ವಂದನೀಯ ಪೀಟರ್ ಪಾವ್ಲ್ ಸಲ್ಡಾನ ಅವರು ಮಾತನಾಡಿ, ವಿವಿಧ ಕ್ಷೇತ್ರದ ಸಾಧಕರುಗಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಸಂದೇಶ ಪ್ರತಿಷ್ಠಾನದಿಂದ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧಕರುಗಳನ್ನು ಗುರುತಿಸಲಿ ಎಂದು ಹೇಳಿದರು.

ಈ ಸಂದರ್ಭ ಹಿರಿಯ ವಿದ್ವಾಂಸ ಪ್ರಸ್ನನ್ನ ಹೆಗ್ಗೋಡು ಅವರಿಗೆ ಸಂದೇಶ ಸಾಹಿತ್ಯ ಪ್ರಶಸ್ತಿ, ಮಂಜಮ್ಮ ಜೋಗತಿ ಅವರಿಗೆ ಸಂದೇಶ ಕಲಾ ಪ್ರಶಸ್ತಿ, ಬಿ.ಎಂ. ಹನೀಫ್ ಅವರಿಗೆ ಸಂದೇಶ ಮಾಧ್ಯಮ ಪ್ರಶಸ್ತಿ, ಬಿ.ಎಮ್. ರೋಹಿಣಿ ಅವರಿಗೆ ಸಂದೇಶ ಶಿಕ್ಷಣ ಪ್ರಶಸ್ತಿ, ವಂದನೀಯ ಬೆನ್ ಬ್ರಿಟ್ಟೋ ಪ್ರಭು ಅವರಿಗೆ ಸಂದೇಶ ಕೊಂಕಣಿ ಸಂಗೀತ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಬಳ್ಳಾರಿ ಧರ್ಮಪ್ರಾಂತದ ಧರ್ಮಾಧ್ಯಕ್ಷರು ಹಾಗೂ ಸಂದೇಶ ಪ್ರತಿಷ್ಠಾನದ ಅಧ್ಯಕ್ಷೆ ವಂದನೀಯ ಹೆನ್ರಿ ಡಿಸೋಜಾ, ಸಂದೇಶ ಪ್ರತಿಷ್ಟಾನದ ನಿರ್ದೇಶಕರಾದ ನೆಲ್ಸನ್ ಪ್ರಕಾಶ್ ದಲ್ಮೇದ, ಸಂದೇಶ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾದ ನಾ ಡಿಸೋಜಾ, ಸಂದೇಶ ಪ್ರತಿಷ್ಠಾನದ ವಿಶ್ವಸ್ತರಾದ ರೊಯ್ ಕ್ಯಾಸ್ತಲಿನೊ, ವಂದನೀಯ ಐವನ್ ಪಿಂಟೋ ಉಪಸ್ಥಿತರಿದ್ದರು.

Related posts

Leave a Reply