Header Ads
Header Ads
Breaking News

ನಂತೂರು ಸರ್ಕಲ್‌ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ:ಗ್ಯಾಸ್ ಸೋರಿಕೆ ಭೀತಿಯಿಂದ ವಿದ್ಯುತ್ ಸಂಪರ್ಕ ಸ್ಥಗಿತ

ಅನಿಲ ತುಂಬಿದ ಟ್ಯಾಂಕರ್‌ವೊಂದು ಇಂದು ಮುಂಜಾನೆ ೪ ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ನಂತೂರು ಸರ್ಕಲ್ ಬಳಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯಿಂದ ನಂತರು ಸರ್ಕಲ್‌ನಿಂದ ಪಡೀಲ್ ಮಾರ್ಗದವರೆಗೂ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸಾರ್ವಜನಿಕರ ಸಹಕಾರದಿಂದ ಕ್ರೇನ್ ಬಳಸಿ ಟ್ಯಾಂಕರ್‌ನ್ನು ರಸ್ತೆಯಿಂದ ತೆರವುಗೊಳಿಸಿದರು. ಗ್ಯಾಸ್ ಸೋರಿಕೆ ಭೀತಿಯಿಂದ ಪರಿಸರದಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಠಗಿತಗೊಳಿಸಲಾಗಿತ್ತು. ಅದೃಷ್ಟವಶಾತ್ ಯಾವುದೇ ಸೋರಿಕೆ ಕಂಡುಬಂದಿರಲಿಲ್ಲ.

Related posts

Leave a Reply