Header Ads
Breaking News

ನಂದಾವರ : ಶೀಘ್ರ ಮಳೆ ಪ್ರಾಪ್ತಿಗಾಗಿ ಸಾಮೂಹಿಕ ಪ್ರಾರ್ಥನೆ, ಸೀಯಾಳಾಭಿಷೇಕ

ಶೀಘ್ರ ಮಳೆ ಪ್ರಾಪ್ತಿಗೆ ವರುಣ ದೇವನ ಕೃಪೆಗಾಗಿ ಸಾಮೂಹಿಕ ಪ್ರಾರ್ಥನೆ ಹಾಗೂ ಸೀಯಾಳಾಭಿಷೇಕ ನಂದಾವರದ ಶ್ರಿ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನದಲ್ಲಿ ನಡೆಯತು. ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ವಿನಾಯಕ ದೇವರಿಗೆ ಸೀಯಾಳಾಭಿಷೇಕ ಮಾಡಲಾಯಿತು. ಈ ಸಂದರ್ಭ ಆಶೀರ್ವಚನ ನೀಡಿದ ಶ್ರೀಗಳು ಪ್ರಕೃತಿಯನ್ನು ಉಳಿಸುವ ಸಂಕಲ್ಪವನ್ನು ನಾವು ಮಾಡಬೇಕು ಎಂದರು.

ಪರ್ವತಗಳ ಅಡಿಭಾಗದಲ್ಲಿರುವ ಶಿಲಾಪಾತ್ರೆಯಲ್ಲಿ ಮಳೆ ನೀರು ಸಂಗ್ರಹಗೊಂಡು ವರ್ಷ ಪೂರ್ತಿ ನೀರಿನ ಒರತೆ ಒದಗಿಸುತ್ತದೆ. ಪ್ರಸ್ತುತ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಎಲ್ಲರೂ ಮಳೆಗಾಗಿ ಪ್ರಾರ್ಥಿಸಬೇಕಾಗಿದೆ ಎಂದರು. ಈ ಸಂದರ್ಭ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಸಿ. ಭಂಡಾರಿ, ಜಿಲ್ಲಾ ಪಂಚಾಯತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಸಜೀಪ ಮೂಡ ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ಬೆಳ್ಚಾಡ, ಪ್ರಧಾನ ಅರ್ಚಕ ವೇ.ಮೂ. ಮಹೇಶ್ ಭಟ್, ವ್ಯವಸ್ಥಾಪನ ಸಮಿತಿ ಸದಸ್ಯರು ಹಾಜರಿದ್ದರು.

Related posts

Leave a Reply

Your email address will not be published. Required fields are marked *