Header Ads
Header Ads
Header Ads
Breaking News

ನಕಲಿ ದಾಖಲೆ ಸೃಷ್ಟಿಸಿ ವಂಚನೆ- ಜಾಲಾ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು

ವಾಹನಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದು ಹಣಕಾಸು ಸಂಸ್ಥೆಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ವಂಚಿಸುತ್ತಿದ್ದ ಹಾಗೂ ನಕಲಿ ನೋಂದಣಿ ಸಂಖ್ಯೆ ಅಳವಡಿಸಿ ವಾಹನಗಳನ್ನು ಉಪಯೋಗಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉಲಾಯಿಬೆಟ್ಟು ಮಂಜಗುಡ್ಡೆ ಮನೆ ನಿವಾಸಿ ನವೀನ್ ನೊರೊನ್ಹಾ (41) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು – ಮೂಡುಶೆಡ್ಡೆ ನಡುವೆ ರೂಟ್ ನಂಬ್ರ: 3ಬಿ ಯಲ್ಲಿ ಸಂಚರಿಸುವ ಬಸ್ ಒಂದಕ್ಕೆ ನಕಲಿ ನೋಂದಣಿ ಸಂಖ್ಯೆಯನ್ನು ಅಳವಡಿಸಿ ಸಂಚಾರ ನಡೆಸುತ್ತಿದೆ ಎಂದು ಮಂಗಳೂರು ಸಿಸಿಬಿ ಪೊಲೀಸ್ ದೊರೆತ ಖಚಿತ ವರ್ತಮಾನದಂತೆ ಆ ಬಸ್ಸನ್ನು ಮಂಗಳೂರು ನಗರದ ಮೂಡುಶೆಡ್ಡೆ ಬಳಿ ಪರಿಶೀಲಿಸಿದಾಗ ಈ ವಂಚನೆ ಬೆಳಕಿಗೆ ಬಂದಿದೆ.ಆರೋಪಿಯನ್ನು ವಿಚಾರಿಸಿದಾಗ ಬಸ್ಸನ್ನು ವ್ಯಕ್ತಿಯೊಬ್ಬರಿಂದ ಖರೀದಿ ಮಾಡಿ ಅದಕ್ಕೆ ತನ್ನ ಮಾಲಕತ್ವದ ಬಸ್ಸಿನ ಚಾಸಿಸ್ ನಂಬ್ರವನ್ನು ಈ ಬಸ್ಸಿಗೆ ನಗರದ ಪಂಪ್ವೆಲ್ ಬಳಿಯ ಬೆಂದೂರಿನ ವಿನ್ಸೆಂಟ್ ಸಿಕ್ವೇರಾ(59), ಮಾಲಕತ್ವದ ವರ್ಕ್ಶಾಪ್ ನಲ್ಲಿ ನಕಲಿಯಾಗಿ ಅಳವಡಿಸಿದ್ದಾನೆ ಎಂದು ಆರೋಪಿಸಲಾಗಿದೆ.

ವಶಪಡಿಸಿಕೊಂಡ ಸೊತ್ತಿನ ಮೌಲ್ಯ ರೂ. 81,09,000 ರೂ. ಎಂದು ಆಂದಾಜಿಸಲಾಗಿದೆ. ಈ ರೀತಿ ಸರಕಾರಕ್ಕೆ ತೆರಿಗೆ ಹಣ ಹಾಗೂ ಹಣಕಾಸು ಸಂಸ್ಥೆಗಳಿಂದ ಸಾಲವನ್ನು ಪಡೆದು ಮರುಪಾವತಿ ಮಾಡದೇ ವಂಚನೆ ಮಾಡುವ ಈ ವ್ಯವಸ್ಥಿತ ಜಾಲದಲ್ಲಿ ಭಾಗಿಯಾದವರ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್ ಅವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಹನುಮಂತರಾಯ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Related posts

Leave a Reply